ADVERTISEMENT

ವೇತನ ₹ 69,000: ಕರ್ಣಾಟಕ ಬ್ಯಾಂಕ್‌ನಲ್ಲಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 7:32 IST
Last Updated 9 ಜನವರಿ 2020, 7:32 IST
   

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಕರ್ಣಾಟಕಬ್ಯಾಂಕಿನ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‌ಲೈನ್‌ ಟೆಸ್ಟ್‌ ಮೂಲಕ ನೇಮಕಾತಿ ನಡೆಯಲಿದೆ. ಫೆಬ್ರುವರಿ 16ರಂದು ಆನ್‌ಲೈನ್‌ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ನವದೆಹಲಿ, ಮುಂಬೈ, ಬೆಂಗಳೂರು, ಮಂಗಳೂರು, ಧಾರವಾಡದಲ್ಲಿ ಪರೀಕ್ಷೆ ನಡೆಯಲಿದೆ.

ಹುದ್ದೆಯ ಹೆಸರು:ಪ್ರೊಬೇಷನರಿ ಆಫೀಸರ್

ADVERTISEMENT

ವಿದ್ಯಾರ್ಹತೆ:ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 69,000 (ಸಿಟಿಸಿ) ವೇತನ ಪಡೆಯಬಹುದು.

ವಯಸ್ಸು:01–01–2020ಕ್ಕೆ ಕನಿಷ್ಠ 18 ವರ್ಷಗಳು, ಗರಿಷ್ಠ 28 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಯೋಮಿತಿ ಸಡಿಲಿಕೆ:ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ಅರ್ಜಿ ಶುಲ್ಕ:ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ₹500 ಹಾಗೂ ಇತರೆ ಅಭ್ಯರ್ಥಿಗಳಿಗೆ ₹ 600 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ: ಆನ್‌ಲೈನ್‌ ಟೆಸ್ಟ್‌ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಕರ್ಣಾಟಕಬ್ಯಾಂಕ್‌ ಹೊರಡಿಸಿರುವಅಧಿಸೂಚನೆಯನ್ನು ನೋಡುವುದು.

ಅರ್ಜಿಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌https://karnatakabank.com/careers ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು2020ರ ಜನವರಿ 18 ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ಣಾಟಕಬ್ಯಾಂಕ್‌ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್‌ ನೀಡಲಾಗಿದೆ.

ಅಧಿಸೂಚನೆ ಲಿಂಕ್‌:https://bit.ly/36EA1Ft

ವೆಬ್‌ಸೈಟ್‌:https://karnatakabank.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.