ಕೇಂದ್ರ ಲೋಕಸೇವಾ ಆಯೋಗವು, 49 ಜಿಯೊಫಿಸಿಸ್ಟ್ ಹಾಗೂ ಎಸ್ಡಿಎಂಒ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
*ವಿದ್ಯಾರ್ಹತೆ: ಭೌತವಿಜ್ಞಾನ, ರಸಾಯನವಿಜ್ಞಾನ, ಭೂಭೌತವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, ಬಿಸಿಎ, ಎಂಸಿಎ, ಎಂಬಿಬಿಎಸ್ (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ).
*ವಯೋಮಿತಿ: ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿದ್ದು, ಇಲಾಖೆಯ ಜಾಲತಾಣದಲ್ಲಿ ಪರಿಶೀಲಿಸಬಹುದು.
*ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹25. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
*ಉದ್ಯೋಗ ಸ್ಥಳ: ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
*ಅರ್ಜಿ ಸಲ್ಲಿಸಲು ಕೊನೆಯ ದಿನ: 27 ಫೆಬ್ರುವರಿ 2020.
*ಹೆಚ್ಚಿನ ಮಾಹಿತಿಗೆ: https://bit.ly/31J2XdK
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.