ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್(ಬಿಐಎಸ್) ಖಾಲಿ ಇರುವ 150 ವಿಜ್ಞಾನಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
*ಹುದ್ದೆಗಳ ಸಂಖ್ಯೆ: 150
*ಕೆಲಸದ ಸ್ಥಳ: ಭಾರತದೆಲ್ಲೆಡೆ
*ವಿದ್ಯಾರ್ಹತೆ: ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ ವಿಭಾಗದಲ್ಲಿ ಪದವಿ ಪಡೆದಿರಬೇಕು. ಶೇ 60ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.
*ವಯೋಮಿತಿ: ಮಾರ್ಚ್ 31, 2020ಕ್ಕೆ ಅನುಗುಣವಾಗಿ 30 ವರ್ಷ ಮೀರಿರಬಾರದು.
*ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕರು, ಅಂಗವಿಕಲರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ವಿನಾಯಿತಿ ಇದೆ. ಉಳಿದ ವರ್ಗದವರಿಗೆ ₹ 100 ಅರ್ಜಿ ಶುಲ್ಕ.
*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 31, 2020
*ಅಧಿಸೂಚನೆ ಲಿಂಕ್: https://bis.gov.in/index.php/recruitment-to-the-post-of-scientist-b/#⇒v
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.