ADVERTISEMENT

ಬ್ಯಾಕ್‌ಲಾಗ್‌ ಹುದ್ದೆ: ಕೊನೆಗೂ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 19:30 IST
Last Updated 16 ಜೂನ್ 2021, 19:30 IST

ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಕೊನೆಗೂ ಅರ್ಜಿ ಆಹ್ವಾನಿಸಲಾಗಿದೆ.

ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಮತ್ತು ಯುವಿಸಿಇ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕ ಬೋಧಕ ಹುದ್ದೆ ಸೇರಿದಂತೆ 20 ಹುದ್ದೆಗಳು ಖಾಲಿ ಇವೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಜುಲೈ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಹುದ್ದೆಗಳ ವಿವರ, ವಿದ್ಯಾರ್ಹತೆ, ಇನ್ನಿತರೆ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ www.bangaloreuniversity.ac.in ನಿಂದ ಪಡೆಯಬಹುದು ಎಂದು ಕುಲಸಚಿವರಾದ (ಆಡಳಿತ) ಕೆ. ಜ್ಯೋತಿ ಹೇಳಿದ್ದಾರೆ.

ADVERTISEMENT

2018ರಲ್ಲಿಯೇ ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದರೂ, ವಿವಿಧ ಕಾರಣಗಳಿಂದ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು. ಖಾಲಿ ಇರುವ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಆದಷ್ಟು ಶೀಘ್ರವಾಗಿ ಮುಗಿಸಬೇಕು ಎಂದು ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಅರ್ಹ ಅಭ್ಯರ್ಥಿಗಳು ಇದ್ದರೆ ನೇರವಾಗಿ ಸಂದರ್ಶನ ನಡೆಸಿ ಪ್ರಕ್ರಿಯೆ ಮುಗಿಸಲು ವಿಶ್ವವಿದ್ಯಾಲಯ ಚಿಂತನೆ ನಡೆಸಿದೆ. ಸಂದರ್ಶನದ ವೇಳೆಯೂ ಸೂಕ್ತ ಅಭ್ಯರ್ಥಿಗಳು ದೊರೆಯದೇ ಹೋದರೆ ಮರು ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕುಲಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.