ADVERTISEMENT

4ನೇ ತರಗತಿ, SSLC ಪಾಸಾದವರಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 6:46 IST
Last Updated 23 ಡಿಸೆಂಬರ್ 2019, 6:46 IST
   

ದಾವಣಗೆರೆ: ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 114 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.ದಾವಣಗೆರೆ ಜಿಲ್ಲೆಯ 05 ಶಿಶು ಅಭಿವೃಧಿ ಯೋಜನೆ ವ್ಯಾಪ್ತಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 18 ರಿಂದ35ವರ್ಷದೊಳಗಿನ ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು. ಪ.ಜಾತಿ, ಪ.ಪಂಗಡ ಮತ್ತು ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿ ಪಾಸಾಗಿದ್ದು, ಗರಿಷ್ಠ ವಿದ್ಯಾರ್ಹತೆ 9ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.

ADVERTISEMENT

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು23/01/2020 ಕೊನೆಯ ದಿನವಾಗಿರುತ್ತದೆ.

ಹುದ್ದೆಗಳ ವಿವರ

1)ಅಂಗನವಾಡಿ ಕಾರ್ಯಕರ್ತೆ: 27

2) ಅಂಗನವಾಡಿಸಹಾಯಕಿ: 87

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು

1 ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್‌ )

2 ಜನನ ಪ್ರಮಾಣ ಪತ್ರ /ಜನ್ಮದಿನಾಂಕ ಇರುವ ಎಸ್ಎಸ್‌ಎಲ್‌ಸಿ ಅಂಕಪಟ್ಟಿ

3ತಹಶೀಲ್ದಾರರು /ಉಪತಹಶೀಲ್ದಾರರು ಪಡೆದ1 ವರ್ಷದೊಳಗಿನ ವಾಸಸ್ಥಳ ದೃಢೀಕರಣ

4 ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳುನ್ನು ಲಗತ್ತಿಸಬೇಕು.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.

ಅಧಿಸೂಚನೆ ಲಿಂಕ್‌:https://bit.ly/2rj1TQ0

ವೆಬ್‌ಸೈಟ್‌:https://anganwadirecruit.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.