ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್ಸೈಟ್ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ.
ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಬಹುದು.
ಹುದ್ದೆಗಳು: ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳು
ಹುದ್ದೆಗಳ ಸಂಖ್ಯೆ: 360
ಸ್ಥಳ: ಬೆಂಗಳೂರು ಮತ್ತು ಇತರೆ ಕಡೆ
ವಿದ್ಯಾರ್ಹತೆ: ಡಿಪ್ಲೊಮಾ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ನೋಡುವುದು.
ಭತ್ಯೆ: ₹15 ಸಾವಿರ ತರಬೇತಿ ಭತ್ಯೆ ನೀಡಲಾಗುವುದು.
ವಯೋಮಿತಿ: ಗರಿಷ್ಠ 28 ವರ್ಷ ಮೀರಿರಬಾರದು . ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ.
ಆಯ್ಕೆ ಪ್ರಕ್ರಿಯೆ: ಡಿಪ್ಲೊಮಾ ಅಥವಾ ಪದವಿಯಲ್ಲಿ ಪಡೆದ ಗರಿಷ್ಠ ಅಂಕಗಳ ಸರಾಸರಿ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ನಡೆಯುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-03-2022
ಹೆಚ್ಚಿನ ಮಾಹಿತಿಗೆ...
* https://bel-india.in
* http://portal.mhrdnats.gov.in/boat/login/user_login.action
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.