ADVERTISEMENT

ಅರಣ್ಯ ರಕ್ಷಕ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳು ಪ್ರಕಟ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 12:10 IST
Last Updated 28 ಡಿಸೆಂಬರ್ 2021, 12:10 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದ ಅರಣ್ಯ ರಕ್ಷಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಸರಿ ಉತ್ತರಗಳನ್ನು ಇಲಾಖೆಯು ಬಿಡುಗಡೆಮಾಡಿದೆ.

ಅರಣ್ಯ ರಕ್ಷಕ ಹುದ್ದೆಯ ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿ ಕೀ ಉತ್ತರಗಳನ್ನು ನೋಡಬಹುದು. ಒಟ್ಟು 339 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ರಾಜ್ಯದ 11 ಸ್ಥಳಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯ ಸರಿ ಉತ್ತರಗಳನ್ನು ಕೆಲ ದಿನಗಳ ಹಿಂದೆ ಪ್ರಕಟಿಸಲಾಗಿತ್ತು. ಈಗ ಪರಿಷ್ಕೃತ ಉತ್ತರಗಳನ್ನು ಪ್ರಕಟಿಸಲಾಗಿದೆ.

ADVERTISEMENT

ಸರಿ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿದರೂ ಉತ್ತರಗಳನ್ನು ಪರೀಕ್ಷಿಸಬಹುದು ಎಂದು ಇಲಾಖೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಇಲಾಖೆಯ ಈ ಕೆಳಗಿನ ವೆಬ್‌ವಿಳಾಸವನ್ನು ನೋಡನಹುದು.

ವೆಬ್‌ಸೈಟ್‌: https://kfdrecruitment.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.