ADVERTISEMENT

ರಾಜ್ಯ ಸರ್ಕಾರ: ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ನಾನಾ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 8:03 IST
Last Updated 27 ಜೂನ್ 2021, 8:03 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕರ್ನಾಟಕ ರಾಜ್ಯದ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಖಾಲಿ ಇರುವ ನಾನಾ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

22 ಅಧ್ಯಕ್ಷರು, 17 ಸದಸ್ಯರು ಹಾಗೂ 17 ಮಹಿಳಾ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ಶೈಕ್ಷಣಿಕ ಅರ್ಹತೆಗಳು: ಅಧ್ಯಕ್ಷರು ಹುದ್ದೆಗೆ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರಬೇಕು. ಅಥವಾ ಜಿಲ್ಲಾ ನ್ಯಾಯಾಧೀಶರಾಗಲು ಅರ್ಹತೆಯನ್ನು ಹೊಂದಿರಬೇಕು. ಸದಸ್ಯರು ಹಾಗೂ ಮಹಿಳಾ ಸದಸ್ಯರ ನೇಮಕಕ್ಕೆ ಅರ್ಜಿ ಸಲ್ಲಿಸುವವರು ಪದವಿ ಪಡೆದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ADVERTISEMENT

ವಯಸ್ಸು: ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು.

ಲಿಖಿತ ಪರೀಕ್ಷೆ: ವಸ್ತುನಿಷ್ಠ ಮಾದರಿಯಲ್ಲಿ 50 ಅಂಕಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದು. ಇದರಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. 30 ಅಂಕಗಳಿಗೆ ಮೌಖಿಕ ಸಂದರ್ಶನ ನಡೆಸಲಾಗುತ್ತದೆ.

ಅರ್ಜಿ ಶುಲ್ಕ: ₹ 250 ಪಾವತಿಸಬೇಕು. (ಎಲ್ಲ ವರ್ಗದ ಅಭ್ಯರ್ಥಿಗಳು)

ಅರ್ಜಿ ಸಲ್ಲಿಕೆ ಕೊನೆ ದಿನ: 01 ಜುಲೈ, 2021

ಅಧಿಸೂಚನೆ ಲಿಂಕ್‌: https://kscdrc.kar.nic.in/NOTIFICATION-29032021.pdf

ವೆಬ್‌ಸೈಟ್‌: https://kscdrc.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.