ADVERTISEMENT

ಗೆಸ್ಕಾಂನಲ್ಲಿ 135 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 9:30 IST
Last Updated 7 ಡಿಸೆಂಬರ್ 2022, 9:30 IST

ಕಲಬುರ್ಗಿ: ಗುಲ್ಬರ್ಗ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (ಗೆಸ್ಕಾಂ), ಅರ್ಹ ಅಭ್ಯರ್ಥಿಗಳಿಂದ ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್‌ನ 135 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಪದವಿ ಅಪ್ರೆಂಟಿಸ್‌ಗೆ ಅಭ್ಯರ್ಥಿಗಳು ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳು ಎಲೆಕ್ಟ್ರಿಕ್ ವಿಷಯದಲ್ಲಿ ಡಿಪ್ಲೊಮಾ ಪಡೆದಿರಬೇಕು.

ಪದವೀಧರ ಅಪ್ರೆಂಟಿಸ್‌ ಹುದ್ದೆಗೆ ಮಾಸಿಕ ₹ 9 ಸಾವಿರ, ಡಿಪ್ಲೊಮೊ ಅಪ್ರೆಂಟಿಸ್‌ ಹುದ್ದೆಗೆ ₹ 8 ಸಾವಿರ ಭತ್ಯೆ ನೀಡಲಾಗುವುದು

ADVERTISEMENT

ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆ ದಿನ: ಡಿಸೆಂಬರ್‌ 8

ವೆಬ್‌ಸೈಟ್‌ | https://gescom.karnataka.gov.in.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.