ADVERTISEMENT

ಸಹಾಯಕ ಪ್ರಾಧ್ಯಾಪಕರ ನೇಮಕ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 17:05 IST
Last Updated 30 ಜನವರಿ 2023, 17:05 IST

ಬೆಂಗಳೂರು: ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.

ರಾಜ್ಯದ ವಿವಿಧ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಹುದ್ದೆಗೆ ಕಳೆದ ಮಾರ್ಚ್‌ನಲ್ಲಿ (2022) ಪರೀಕ್ಷೆ ನಡೆಸಲಾಗಿತ್ತು. 33,379 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಸಂದರ್ಶನ ಇಲ್ಲದೇ ಅಂಕಗಳ ಆಧಾರದಲ್ಲೇ ನೇಮಕ ಪ್ರಕ್ರಿಯೆ ನಡೆಸಲಾಗಿತ್ತು. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಮೀಸಲಾತಿಗೆ ಅನುಗುಣವಾಗಿ ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT