ADVERTISEMENT

ಬ್ಯಾಂಕ್‌ ಆಫ್ ಬರೋಡಾ: ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 6:22 IST
Last Updated 25 ನವೆಂಬರ್ 2021, 6:22 IST
   

ದೇಶದಾದ್ಯಂತ ಬ್ಯಾಂಕ್‌ ಆಫ್ ಬರೋಡಾ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ ( ರಿಲೇಷನ್‌ಶಿಪ್‌ ಮ್ಯಾನೇಜರ್ ಮತ್ತು ಇ–ಮೇಲ್ ರಿಲೇಷನ್‌ಶಿಪ್‌ ಮ್ಯಾನೇಜರ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು: ವಿಶೇಷ ಅಧಿಕಾರಿ ( ರಿಲೇಷನ್‌ಶಿಪ್‌ ಮ್ಯಾನೇಜರ್ ಮತ್ತು ಇ–ಮೇಲ್ ರಿಲೇಷನ್‌ಶಿಪ್‌ ಮ್ಯಾನೇಜರ್)

ಹುದ್ದೆಗಳ ಸಂಖ್ಯೆ: 376

ADVERTISEMENT

ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.

ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 36,700 ಮೂಲ ವೇತನ ಪಡೆಯಬಹುದು.

ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 30 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ₹ 100. ಇತರೆ ಅಭ್ಯರ್ಥಿಗಳಿಗೆ ₹ 600 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವುದು.

ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ https://smepaisa.bankofbaroda.co.in/bobSRM/ ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2021ರ ಡಿಸೆಂಬರ್‌ 09 ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಎಸ್‌ಬಿಐ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್‌ ನೀಡಲಾಗಿದೆ.

ವೆಬ್‌ಸೈಟ್‌: https://www.bankofbaroda.in

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.