ದೇಶದಾದ್ಯಂತ ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ನ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ (ರಿಲೇಷನ್ಶಿಪ್ ಮ್ಯಾನೇಜರ್ ಮತ್ತು ಕ್ರೆಡಿಟ್ ಅನಾಲಿಸ್ಟ್ ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ: 325
ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ಈ ಕೆಳಗೆ ಅಧಿಸೂಚನೆಯ ಲಿಂಕ್ ನೀಡಿದೆ ಗಮನಿಸಬಹುದು.
ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 36,700 ಮೂಲ ವೇತನ ಪಡೆಯಬಹುದು.
ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 42 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ವಯೋಮಿತಿ ಸಡಿಲಿಕೆ: ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ₹ 100. ಇತರೆ ಅಭ್ಯರ್ಥಿಗಳಿಗೆ ₹ 600 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವುದು.
ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್ https://ibpsonline.ibps.in/bobsojun22/basic_details.php/ ಗೆ ಲಾಗಿನ್ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2022ರ ಜುಲೈ 12 ಕೊನೆ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು.
ಅಧಿಸೂಚನೆ ಲಿಂಕ್:https://www.bankofbaroda.in/-/media/Project/BOB/CountryWebsites/India/Career/advertisement-cic-22-06-2022-21-29.pdf
ವೆಬ್ಸೈಟ್: https://www.bankofbaroda.in
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.