ಪ್ರಾತಿನಿಧಿಕ ಚಿತ್ರ
ಬಹುಆಯ್ಕೆಯ ಪ್ರಶ್ನೋತ್ತರಗಳು
ಭಾರತದ ಕೆಳಗಿನ ಯಾವ ರಾಜ್ಯದಲ್ಲಿ ಕೋಲ್ಮಿಂಚಿನ ಘಟನೆಗಳು ಹೆಚ್ಚಾಗಿ ಕಂಡುಬರುತ್ತದೆ?
ಎ. ಒಡಿಶಾ.
ಬಿ. ನಾಗಾಲ್ಯಾಂಡ್.
ಸಿ. ಉತ್ತರ ಪ್ರದೇಶ.
ಡಿ. ಮಧ್ಯಪ್ರದೇಶ.
ಎ
ಕೆನಡಾದ ಯಾವ ಪ್ರದೇಶಗಳಲ್ಲಿ ಕಾಡ್ಗಿಚ್ಚುಗಳ ಘಟನೆಗಳು ಹೆಚ್ಚಾಗಿ ಕಂಡುಬಂದಿದೆ?
1. ಬ್ರಿಟಿಷ್ ಕೊಲಂಬಿಯಾ.
2. ಆಲ್ಬರ್ಟಾ.
3. ಒಂಟಾರಿಯೋ.
4. ನೋವಾ ಸ್ಕಾಟಿಯಾ.
ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.
ಎ. 1 ಮಾತ್ರ
ಬಿ. 1, 2, 3 ಮತ್ತು 4
ಸಿ. 2 ಮತ್ತು 3
ಡಿ. 3 ಮತ್ತು 4.
ಬಿ
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. ಸಂವಿಧಾನದ ಅನುಚ್ಛೇದ 32 ಅಡಿಯಲ್ಲಿ ಸುಪ್ರೀಂಕೋರ್ಟ್‌ಗೆ ಯಾವುದೇ ಸಂಬಂಧಪಟ್ಟ ವ್ಯಕ್ತಿ ಅಥವಾ ಬೇರೆಯವರು ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಬಹುದು.
ಬಿ. ಸಂವಿಧಾನದ ಅನುಚ್ಛೇದ 226 ಅಡಿಯಲ್ಲಿ ಹೈಕೋರ್ಟ್‌ಗೆ ಯಾವುದೇ ಸಂಬಂಧಪಟ್ಟ ವ್ಯಕ್ತಿ ಅಥವಾ ಬೇರೆಯವರು ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಬಹುದು.
ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಡಿ
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದರೆ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಜನರ ಹಿತರಕ್ಷಣೆಗಾಗಿ ಹೂಡಲಾದ ಅರ್ಜಿಗಳಾಗಿವೆ.
ಬಿ. ಸಂವಿಧಾನದ ವಿಧಿ 32 ರನ್ವಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಸವೋಚ್ಛ ನ್ಯಾಯಾಲಯದ ಅಧಿಕಾರ ವ್ಯಾಪ್ತಿಯ ವಿಸ್ತರಣೆಯಾಗಿದೆ.
ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಡಿ
ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. ದುರ್ಬಲ ವರ್ಗಗಳ ಮೂಲಭೂತ ಹಕ್ಕುಗಳ ಅತಿಕ್ರಮಣಗಳ ವಿರುದ್ದ ಇದನ್ನು ಸಲ್ಲಿಸಬಹುದು.
ಬಿ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧದ ದೌರ್ಜನ್ಯಗಳ ವಿರುದ್ದ ಇದನ್ನು ಸಲ್ಲಿಸಲು
ಬರುವುದಿಲ್ಲ.
ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಎ
ಕಾರ್ಯತಂತ್ರದ ಸಹಭಾಗಿತ್ವ ಮಂಡಳಿಯ ಮಾತುಕತೆಯ ವಿವಿಧ ಹಂತಗಳನ್ನು ಗುರುತಿಸಿ?
1. ಶೃಂಗಸಭೆಯ ಮಟ್ಟದಲ್ಲಿ ಎರಡು ರಾಷ್ಟ್ರಗಳ ಮುಖ್ಯಸ್ಥರು ಮಾತುಕತೆಯಲ್ಲಿ ಭಾಗವಹಿಸುತ್ತಾರೆ.
2. ಶೃಂಗಸಭೆಯ ಮಟ್ಟದ ನಂತರ ಸಚಿವರ ಹಂತದ ಮಾತುಕತೆಗೆ ವೇದಿಕೆಯನ್ನು ಕಲ್ಪಿಸಲಾಗಿದೆ.
ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.
ಎ. 1 ಮಾತ್ರ ಬಿ. 2 ಮಾತ್ರ
ಸಿ. 1 ಮತ್ತು 2 ಡಿ. ಮೇಲಿನ ಎರಡು ಹೇಳಿಕೆಗಳು ತಪ್ಪಾಗಿವೆ.
ಸಿ
ಸೌದಿ ಅರೇಬಿಯಾ ಕೆಳಗಿನ ಯಾವ ರಾಷ್ಟ್ರಗಳೊಂದಿಗೆ ಕಾರ್ಯತಂತ್ರದ ಸಹಭಾಗಿತ್ವ ಒಪ್ಪಂದವನ್ನು ಸಹಿ ಹಾಕಿದೆ?
1. ಅಮೇರಿಕಾ.
2. ಯುನೈಟೆಡ್ ಕಿಂಗ್ಡಮ್.
3. ಫ್ರಾನ್ಸ್.
4. ಚೀನಾ.
ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.
ಎ. 2, 3 ಮತ್ತು 4
ಬಿ. 1, 2 ಮತ್ತು 3
ಸಿ. 1, 2, 3 ಮತ್ತು 4
ಡಿ. 3 ಮತ್ತು 4
ಎ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.