ADVERTISEMENT

ಭಾರತ ಸರ್ಕಾರ | 7ನೇತರಗತಿ ಪಾಸ್‌:1080 ಸೆಕ್ಯೂರಿಟಿ ಗಾರ್ಡ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 7:51 IST
Last Updated 7 ಜೂನ್ 2021, 7:51 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕೋಲ್‌ ಇಂಡಿಯಾದ ಈಸ್ಟರ್ನ್‌ ವಿಭಾಗದಲ್ಲಿ ಖಾಲಿ ಇರುವ 1080 ಸೆಕ್ಯೂರಿಟಿ ಗಾರ್ಡ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ನಮೂನೆ ಮೂಲಕವೇ ಅರ್ಜಿ ಸಲ್ಲಿಸಬಹುದು.

ಕೋಲ್ ಇಂಡಿಯಾದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವವರು ಮಾತ್ರ ಅರ್ಜಿಸಲ್ಲಿಸಲು ಅರ್ಹರಾಗಿರುತ್ತಾರೆ. ಇದು ಆಂತರಿಕ ನೇಮಕಾತಿಯಾಗಿರುತ್ತದೆ ಎಂದು ಕೋಲ್‌ ಇಂಡಿಯಾ ಪ್ರಕಟನೆಯಲ್ಲಿ ತಿಳಿಸಿದೆ.

ಹುದ್ದೆಗಳ ವಿವರ: ಸೆಕ್ಯೂರಿಟಿ ಗಾರ್ಡ್‌

ADVERTISEMENT

ಒಟ್ಟು ಹುದ್ದೆಗಳ ಸಂಖ್ಯೆ: 1080

ಮೀಸಲಾತಿ: ಸಾಮಾನ್ಯ –842, ಎಸ್‌ಸಿ –163, ಎಸ್‌ಟಿ –81

ವಿದ್ಯಾರ್ಹತೆ: ಸರ್ಕಾರದ ಮಾನ್ಯತೆ ಪಡೆದ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ಸಡಿಲಿಕೆ: 09 ಜನವರಿ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 35 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ನೇಮಕಾತಿ ವಿಧಾನ: 7ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆ ಮೂಲಕವೇ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 15 ಜೂನ್‌, 2021

ನಿಗದಿತ ಅರ್ಜಿ ನಮೂನೆ ಲಿಂಕ್‌: http://www.easterncoal.gov.in/notices/recruitment/20210521internalnotification.pdf

ವೆಬ್‌ಸೈಟ್‌: http://www.easterncoal.gov.in/notices/recruitmentheader.aspx

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.