ADVERTISEMENT

ಕೊಡಗು | ಕಾಫಿ ಬೋರ್ಡ್‌ನಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಅಕ್ಟೋಬರ್ 2025, 5:04 IST
Last Updated 4 ಅಕ್ಟೋಬರ್ 2025, 5:04 IST
   

ಕೊಡಗಿನ ಚೆಟ್ಟಳ್ಳಿಯ ಕಾಫಿ ಬೋರ್ಡ್ ಆಫ್ ಇಂಡಿಯಾವು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಎಂಎಸ್ಸಿ ಪದವಿ ಮುಗಿಸಿರುವ ಅಭ್ಯರ್ಥಿಗಳು ಅಕ್ಟೋಬರ್ 08 ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗುವಂತೆ ಕಾಫಿ ಬೋರ್ಡ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಹುದ್ದೆಯ ವಿವರ:  

  • ಹುದ್ದೆ: 1

    ADVERTISEMENT
  • ಉದ್ಯೋಗ ಸ್ಥಳ: ಕೊಡಗು

  • ಹುದ್ದೆಯ ಹೆಸರು: ಯುವ ವೃತ್ತಿಪರ

  • ಸಂಬಳ: ತಿಂಗಳಿಗೆ ₹21,000

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಎಂ.ಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:

ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ಸ್ಥಳ: 

ಉಪನಿರ್ದೇಶಕರ ಕಚೇರಿ (ಸಂಶೋಧನೆ)

ಕಾಫಿ ಸಂಶೋಧನಾ ಉಪಕೇಂದ್ರ

ಚೆಟ್ಟಳ್ಳಿ

ಕೊಡಗು ಜಿಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.