ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. 1973ರ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲಭೂತ ರಚನೆಯನ್ನು ತಿದ್ದುಪಡಿ ಮಾಡಲು ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಬಿ. 2007ರ ಐ.ಆರ್ ಕೊಯೆಲ್ಹೋ ಪ್ರಕರಣದಲ್ಲಿನ ಸುಪ್ರೀಂಕೋರ್ಟ್ ತೀರ್ಪಿನಂತೆ 368ನೇ ವಿಧಿಯು ಸಂವಿಧಾನದ ಮೂಲಭೂತ ರಚನೆಯ ಭಾಗವಾಗಿದೆ.
ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಉತ್ತರ : ಡಿ
****
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ಅಡ್ಡಿ ಉಂಟಾದರೆ ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನ ನಡೆಸಲು ಸಂವಿಧಾನದಲ್ಲಿ ಅವಕಾಶ ಒದಗಿಸಲಾಗಿದೆ.
ಬಿ. ರಾಜ್ಯ ಶಾಸಕಾಂಗಗಳು ತಮಗೆ ಸಲ್ಲಿಸಿದ ತಿದ್ದುಪಡಿ ಮಸೂದೆಗಳನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಕಾಲಮಿತಿಯನ್ನು ಸಂವಿಧಾನವು ಸೂಚಿಸುವುದಿಲ್ಲ.
ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಉತ್ತರ: ಬಿ
****
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. ಭಾರತೀಯ ಸಂವಿಧಾನದ 108ನೇ ವಿಧಿಯ ಪ್ರಕಾರ, ಸಂಸತ್ತಿನ ಜಂಟಿ ಅಧಿವೇಶನವನ್ನು ರಾಷ್ಟ್ರಪತಿಗಳು ಕರೆಯುತ್ತಾರೆ.
ಬಿ. ಸಂಸತ್ತಿನ ಜಂಟಿ ಅಧಿವೇಶನದ ಅಧ್ಯಕ್ಷತೆಯನ್ನು ಸ್ಪೀಕರ್, ಅವರ ಅನುಪಸ್ಥಿತಿಯಲ್ಲಿ, ಲೋಕಸಭೆಯ ಉಪ ಸ್ಪೀಕರ್ ಅಥವಾ ಅವರ ಅನುಪಸ್ಥಿತಿಯಲ್ಲಿ, ರಾಜ್ಯಸಭೆಯ ಉಪಾಧ್ಯಕ್ಷರು ವಹಿಸುತ್ತಾರೆ.
ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.
ಉತ್ತರ : ಡಿ
****
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ತಮ್ಮ ಜೀವನಾವಧಿಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಇಬ್ಬರು ಹಿರಿಯ ವಿಜ್ಞಾನಿಗಳಿಗೆ ಅಥವಾ ಎಂಜಿನಿಯರ್‌ಗಳಿಗೆ ಸರ್ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
ಬಿ. ಸರ್ ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿಯು ₹ 5,00,000 ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಉತ್ತರ : ಎ
****
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. ವಿಜ್ಞಾನ ಶಿಕ್ಷಣ, ವಿಜ್ಞಾನದ ಇತಿಹಾಸ ಮತ್ತು ತತ್ವಜ್ಞಾನ, ವಿಜ್ಞಾನ ಮತ್ತು ಸಮಾಜ ಕ್ಷೇತ್ರಗಳಲ್ಲಿ ರಾಜ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಇಬ್ಬರು ಹಿರಿಯ ವಿಜ್ಞಾನಿಗಳಿಗೆ ಅಥವಾ ಎಂಜಿನಿಯರ್‌ಗಳಿಗೆ ಡಾ.ರಾಜಾ ರಾಮಣ್ಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
ಬಿ. ಡಾ. ರಾಜಾ ರಾಮಣ್ಣ ಪ್ರಶಸ್ತಿಯು ₹1,50,000 ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಉತ್ತರ: ಡಿ
****
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. 2023ನೇ ಸಾಲಿನ ಕರ್ನಾಟಕ ರಾಜ್ಯದ ಡಾ| ರಾಜಾ ರಾಮಣ್ಣ ಪ್ರಶಸ್ತಿಯನ್ನು ಡಾ. ಸಿವಿ ಯಲಮಗ್ಗಡ ಮತ್ತು ಪ್ರೊ. ರಾಮನಾಥನ್ ಶ್ರೀನಿವಾಸನ್ ಸೌಧಾಮಿನಿ ರವರಿಗೆ ನೀಡಿ ಗೌರವಿಸಲಾಗಿದೆ.
ಬಿ. 2023ನೇ ಸಾಲಿನ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸರ್. ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ರಾಜ್ಯ ಪ್ರಶಸ್ತಿಯನ್ನು ಡಾ.ಶುಭಾ. ವಿ ಮತ್ತು ಪ್ರೊ.ಮದನ್ ರಾವ್ ರವರಿಗೆ ನೀಡಿ ಗೌರವಿಸಲಾಗಿದೆ.
ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಉತ್ತರ: ಡಿ
****
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ. ಸಂವಿಧಾನದ 46ನೇ ವಿಧಿಯು, ಇದು ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಸಮಾಜದ ಇತರ ದುರ್ಬಲ ವರ್ಗಗಳ ಶೈಕ್ಷಣಿಕ ಮತ್ತು ಆರ್ಥಿಕ ಹಿತಾಸಕ್ತಿಗಳ ರಕ್ಷಣೆ ಮತ್ತು ಪ್ರಚಾರವನ್ನು ಕುರಿತು ತಿಳಿಸುತ್ತದೆ.
ಬಿ. ಸಂವಿಧಾನದ 47ನೇ ವಿಧಿಯು, ಆರೋಗ್ಯಕ್ಕೆ ಹಾನಿಕರವಾದ ಮಾದಕ ಪಾನೀಯಗಳು ಮತ್ತು ಮಾದಕ ದ್ರವ್ಯಗಳ ಸೇವನೆಯನ್ನು ನಿಷೇಧಿಸುವುದನ್ನು ಕುರಿತು ತಿಳಿಸುತ್ತದೆ.
ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಉತ್ತರ : ಡಿ
****
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.
ಎ.ಸಂವಿಧಾನದ 50ನೇ ವಿಧಿಯು, ಸ್ಮಾರಕ ಅಥವಾ ರಾಷ್ಟ್ರೀಯ ಪ್ರಾಮುಖ್ಯ ಸ್ಥಳವನ್ನು ವಿರೂಪಗೊಳಿಸುವಿಕೆಯನ್ನು ತಡೆಗಟ್ಟುವುದು, ಸ್ಮಾರಕಗಳು ಮತ್ತು ಐತಿಹಾಸಿಕ ಸ್ಥಳಗಳ ರಕ್ಷಣೆಯನ್ನು ಕುರಿತು ತಿಳಿಸುತ್ತದೆ.
ಬಿ. ಸಂವಿಧಾನದ 49ನೇ ವಿಧಿಯು, ರಾಜ್ಯದ ಸಾರ್ವಜನಿಕ ಸೇವೆಗಳಲ್ಲಿ ಕಾರ್ಯಾಂಗದಿಂದ ನ್ಯಾಯಾಂಗವನ್ನು ಪ್ರತ್ಯೇಕಿಸುವುದನ್ನು ತಿಳಿಸುತ್ತದೆ.
ಸರಿಯಾದ ಉತ್ತರವನ್ನು ಆರಿಸಿರಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.
ಉತ್ತರ: ಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.