ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ)ಯು ಖಾಲಿ ಇರುವ ವಿವಿಧ 27 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
lಹುದ್ದೆಗಳು: ಹಿರಿಯ ಕಾನೂನು ಅಧಿಕಾರಿ, ಖಾತೆ ಅಧಿಕಾರಿ, ವಿಭಾಗ ಅಧಿಕಾರಿ, ಖಾಸಗಿ ಕಾರ್ಯದರ್ಶಿ, ಹಿರಿಯ ತಾಂತ್ರಿಕ ಮೇಲ್ವಿಚಾರಕ ಹಾಗೂ ತಾಂತ್ರಿಕ ಮೇಲ್ವಿಚಾರಕರು.
lಹುದ್ದೆಗಳ ಸಂಖ್ಯೆ: 27
lಸ್ಥಳ: ಭಾರತದೆಲ್ಲೆಡೆ
lವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ಡಿಪ್ಲೊಮಾ ಪದವಿ ಪಡೆದಿರಬೇಕು.
lವಯೋಮಿತಿ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 56 ವರ್ಷ ಮೀರಿರಬಾರದು.
lಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
lಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 30, 2020
lಅಧಿಸೂಚನೆ ಲಿಂಕ್:https://cpcb.nic.in/jobs.php
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.