ADVERTISEMENT

ಪದವಿ ವಿದ್ಯಾರ್ಹತೆ | RBIನಲ್ಲಿ 950 ಅಸಿಸ್ಟೆಂಟ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2022, 8:43 IST
Last Updated 15 ಫೆಬ್ರುವರಿ 2022, 8:43 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಅಸಿಸ್ಟೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 950

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು. ನೇಮಕಾತಿ ಸ್ಥಳದ ಪ್ರಾದೇಶಿಕಭಾಷೆ ಬಲ್ಲವರಾಗಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ADVERTISEMENT

ವೇತನ ಶ್ರೇಣಿ: ಮಾಸಿಕ ₹14,650– ₹34.900 ವೇತನ ನೀಡಲಾಗುವುದು.

ವಯಸ್ಸು: ಕನಿಷ್ಠ 18 ವರ್ಷ, ಗರಿಷ್ಠ 28

ವಯೋಮಿತಿ ಸಡಿಲಿಕೆ

ಎಸ್‌ಸಿ/ಎಸ್‌ಟಿ: 5 ವರ್ಷಗಳು

ಒಬಿಸಿ: 3 ವರ್ಷಗಳು

ಅಂಗವಿಕಲರು 10 ವರ್ಷಗಳು

ನೇಮಕಾತಿ: ನೇಮಕಾತಿ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯುವುತ್ತದೆ. ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳಿಗೆ ಮೂರನೆ ಹಂತದಲ್ಲಿ ಸ್ಥಳೀಯ ಭಾಷೆಯ ಪರೀಕ್ಷೆ ನಡೆಸಲಾಗುವುದು. ರಾಜ್ಯದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುವುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ www.rbi.org.in ಗೆ ಲಾಗಿನ್‌ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಕಡೆಯ ದಿನಾಂಕ: 08-03-2022

ಹೆಚ್ಚಿನ ಮಾಹಿತಿಗೆ: https://www.rbi.org.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.