ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್ಡಿಒ) ವಿಜ್ಞಾನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್ ಪದವಿ ಹಾಗೂ ಬಿಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ: 185
ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಯ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್ ನೋಡುವುದು.
ವಯಸ್ಸಿನ ಗರಿಷ್ಠ ಮಿತಿ
ಸಾಮಾನ್ಯ ಅಭ್ಯರ್ಥಿಗಳು: 28 ವರ್ಷಗಳು
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 31 ವರ್ಷಗಳು
ಎಸ್ಸಿ, ಎಸ್ಟಿ ಅಭ್ಯರ್ಥಿಗಳು: 33 ವರ್ಷಗಳು
ನೇಮಕಾತಿ ವಿಧಾನ: ಲಿಖಿತ ಪರೀಕ್ಷೆಯ ಮೂಲಕ ನೇಮಕಾತಿ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್ ಅನ್ನು ಕ್ಲಿಕ್ಕಿಸಿ ನೋಡಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-07-2020
ಅಧಿಸೂಚನೆ ಲಿಂಕ್: https://rac.gov.in/download/advt_137.pdf
ವೆಬ್ಸೈಟ್: https://drdo.gov.in/careers
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.