ADVERTISEMENT

ಉದ್ಯೋಗ ವಾರ್ತೆ: ಬಿಇಎಲ್‌ನಲ್ಲಿ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ

ಉದ್ಯೋಗವಾರ್ತೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 0:30 IST
Last Updated 16 ಡಿಸೆಂಬರ್ 2021, 0:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಎಸ್‌ಬಿಐನಲ್ಲಿ ಸಿಬಿಒ ಹುದ್ದೆಗಳು

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ)ದಲ್ಲಿ ಖಾಲಿ ಇರುವ 1226 ಸರ್ಕಲ್ ಬೇಸ್ಡ್‌ ಆಫೀಸರ್ (ಸಿಬಿಒ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 278 ಹುದ್ದೆಗಳು ಖಾಲಿ ಇವೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

lಹುದ್ದೆ: ಸರ್ಕಲ್ ಬೇಸ್ಡ್‌ ಆಫೀಸರ್

ADVERTISEMENT

lಹುದ್ದೆಗಳ ಸಂಖ್ಯೆ: 1226

lವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

lವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ಮೀರಿರಬಾರದು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

lಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ ₹ 750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

lನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಎಸ್‌ಬಿಐ ಹೊರಡಿಸಿರುವ ಅಧಿಸೂಚನೆಯನ್ನು ಗಮನಿಸಿ.

lಅರ್ಜಿ ಸಲ್ಲಿಕೆ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ https://www.sbi.co.in/web/careers ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

lಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 29, 2021

lಹೆಚ್ಚಿನ ಮಾಹಿತಿಗೆ: https://www.sbi.co.in/web/careers

ಸಿಐಎಸ್‌ಎಫ್‌ನಲ್ಲಿ ಸಹಾಯಕ ಕಮಾಂಡರ್ ಹುದ್ದೆಗಳಿಗೆ ಅರ್ಜಿ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ(ಸಿಐಎಸ್‌ಎಫ್‌) ಖಾಲಿ ಇರುವ ಸಹಾಯಕ ಕಮಾಂಡರ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 29 ಹುದ್ದೆಗಳನ್ನು ನೇಮಕ ಮಾಡಿಕೊಳ್ಳ ಲಾಗುವುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

lಹುದ್ದೆಗಳ ಸಂಖ್ಯೆ: 29

lವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

lವಯೋಮಿತಿ: ಹುದ್ದೆಗಳಿಗೆ ಅನುಸಾರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ಗಮನಿಸಿ.

lನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು.

lಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಕೇಂದ್ರ ಲೋಕಸೇವಾ ಆಯೋಗದ ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ನಂತರ ಅರ್ಜಿಯನ್ನು ಡೌನ್‌ಲೋಡ್‌ ಮಾಡಿಕೊಂಡು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಅಂಚೆ ಮೂಲಕ ಸಲ್ಲಿಸಬೇಕು.

lಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 21, 2021

lಹೆಚ್ಚಿನ ಮಾಹಿತಿಗೆ: https://upsc.gov.in

*****

ಬಿಇಎಲ್‌ನಲ್ಲಿ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ

ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) 2021ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

lಹುದ್ದೆಗಳು: ಪ್ರಾಜೆಕ್ಟ್ ಎಂಜಿನಿಯರ್‌

lಹುದ್ದೆಗಳ ಸಂಖ್ಯೆ: 36

lಸ್ಥಳ: ಬೆಂಗಳೂರು ಮತ್ತು ಇತರೆ ಕಡೆ

lವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ, ಬಿಟೆಕ್‌, ಎಂಬಿಎ, ಪಿಜಿ ಡಿಪ್ಲೊಮಾ, ಬಿಆರ್ಕ್‌ ಪದವಿ ಪಡೆದಿರಬೇಕು.

lವಯೋಮಿತಿ: ಪ್ರಾಜೆಕ್ಟ್ ಎಂಜಿನಿಯರ್‌ಗೆ 28 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ.

lಆಯ್ಕೆ ಪ್ರಕ್ರಿಯೆ: ಪದವಿ ಅಂತಿಮ ವರ್ಷದ ಅಂಕಗಳ ಸರಾಸರಿ ಹಾಗೂ ವೈಯಕ್ತಿಕ ಸಂದರ್ಶನ.

lಅರ್ಜಿ ಶುಲ್ಕ: ಪ್ರಾಜೆಕ್ಟ್ ಎಂಜಿನಿಯರ್‌ ಹುದ್ದೆಯ ಒಬಿಸಿ ಅಭ್ಯರ್ಥಿಗಳಿಗೆ ₹ 500 ಇದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

lಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 26, 2021

lಹೆಚ್ಚಿನ ಮಾಹಿತಿಗೆ: https://bel-india.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.