ADVERTISEMENT

ಉದ್ಯೋಗ ವಾರ್ತೆ: ಭೂ ದಾಖಲೆಗಳ ಇಲಾಖೆಯಲ್ಲಿ 3000 ಹುದ್ದೆಗಳು

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 19:31 IST
Last Updated 12 ಜನವರಿ 2022, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭೂ ಮಾಪಕರ ಹುದ್ದೆಗೆ ಅರ್ಜಿ ಆಹ್ವಾನ
ಭೂ ಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆಗಳ ಇಲಾಖೆ ಭೂ ಮಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಭೂ ಮಾಪಕ
ಹುದ್ದೆಗಳ ಸಂಖ್ಯೆ: 3000
ಸ್ಥಳ: ಕರ್ನಾಟಕದೆಲ್ಲೆಡೆ
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ದ್ವಿತೀಯ ಪಿಯುಸಿಯನ್ನು ಶೇ 60 ಅಂಕಗಳೊಂದಿಗೆ ಪಾಸಾಗಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ, ಬಿಟೆಕ್‌ (ಸಿವಿಲ್‌), ಡಿಪ್ಲೊಮಾ ಸಿವಿಲ್ ಎಂಜಿನಿಯರಿಂಗ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗೆ ಕನಿಷ್ಠ 18 ಹಾಗೂ ಗರಿಷ್ಠ 65 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ: ₹ 1000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 21, 2022
ಹೆಚ್ಚಿನ ಮಾಹಿತಿಗೆ: https://rdservices.karnataka.gov.in/

**

ಶಿವಮೊಗ್ಗ ಕೋರ್ಟ್‌ನಲ್ಲಿ ಹುದ್ದೆಗಳು
ಶಿವಮೊಗ್ಗ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಲಯ ಘಟಕದ ವಿವಿಧ ನ್ಯಾಯಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಬೆರಳಚ್ಚು ನಕಲುಗಾರ, ಬೆರಳಚ್ಚುಗಾರ ಹಾಗೂ ಶೀಘ್ರಗಾರ ಲಿಪಿಗಾರ
ಹುದ್ದೆಗಳ ಸಂಖ್ಯೆ: 17
ಸ್ಥಳ: ಶಿವಮೊಗ್ಗ
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿಯೊಂದಿಗೆ ಹುದ್ದೆಗೆ ಸಂಬಂಧಿಸಿದ ಸರ್ಟಿಫಿಕೇಟ್ ಕೋರ್ಸ್ ಮುಗಿಸಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ. ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ, 2ಬಿ. 3ಎ, 3ಬಿ ವರ್ಗದವರಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ₹ 200, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹ 100 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 30, 2022
ಹೆಚ್ಚಿನ ಮಾಹಿತಿಗೆ: https://districts.ecourts.gov.in/shivamogga

ADVERTISEMENT

ಮೈನಿಂಗ್, ರಿಸರ್ಚ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ

ಕೇಂದ್ರ ಲೋಕಸೇವಾ ಆಯೋಗವು ಮೈನಿಂಗ್, ರಿಸರ್ಚ್‌ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳು: ವಿವಿಧ ಆಫೀಸರ್‌ ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಹುದ್ದೆಗಳಿಗೆ ಅನುಸಾರ ಯುಪಿಎಸ್‌ಸಿ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡಬಹುದು.

ಆಯ್ಕೆ ‍ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27–01–2022

ವೆಬ್‌ಸೈಟ್: www.upsc.gov.in

**
ಕ್ರೀಡಾ ಕೋಟಾದಡಿಯಲ್ಲಿ ಅರ್ಜಿ ಆಹ್ವಾನ

ರೈಲ್ವೆ ಇಲಾಖೆಯ ಆಗ್ನೇಯ (South Eastern Railway) ರೈಲ್ವೆ ವಿಭಾಗದಲ್ಲಿ ಅರ್ಜಿ ಆಹ್ವಾನ

ಸದರಿ ಹುದ್ದೆಗಳು ಗ್ರೂಪ್‌ ಸಿ ಹುದ್ದೆಗಳಾಗಿರುತ್ತವೆ. ಕ್ರಿಕೆಟ್, ಹಾಕಿ, ಬಾಸ್ಕೆಟ್‌ ಬಾಲ್‌, ಕುಸ್ತಿ, ಟೇಬಲ್‌ ಟೆನಿಸ್‌, ಹ್ಯಾಂಡ್‌ಬಾಲ್‌, ವಾಟರ್ ಪೋಲೋ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿರಬೇಕು. ಈ ಸಂಬಂಧದ ಹೆಚ್ಚಿನ ಮಾಹಿತಿಗೆ ರೈಲ್ವೆಯ ವೆಬ್‌ಸೈಟ್‌ ನೋಡಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು
ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 25
ವರ್ಷ ಮೀರಿರಬಾರದು. ಪಿಯುಸಿ/ಪದವಿಯಲ್ಲಿ ಪಾಸಾಗಿರಬೇಕು.

ಅಭ್ಯರ್ಥಿಗಳು https://ser.indianrailways.gov.in/ ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬೇಕು, ಅಗತ್ಯ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕಡೆ ದಿನ: 02-02-2022

ವೆಬ್‌ಸೈಟ್‌: https://ser.indianrailways.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.