ADVERTISEMENT

4ನೇ, 10ನೇ ತರಗತಿ ಪಾಸ್‌: ಬೀದರ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 8:15 IST
Last Updated 3 ಜನವರಿ 2022, 8:15 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೀದರ್‌ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.

ಹುದ್ದೆಗಳ ಸಂಖ್ಯೆ: 94

ADVERTISEMENT

ಅಂಗನವಾಡಿ ಕಾರ್ಯಕರ್ತೆ: 28

ಅಂಗನವಾಡಿ ಸಹಾಯಕಿ: 66

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು...

1) ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್‌ )

2) ಜನನ ಪ್ರಮಾಣ ಪತ್ರ /ಜನ್ಮದಿನಾಂಕ ಇರುವ ಎಸ್ಎಸ್‌ಎಲ್‌ಸಿ ಅಂಕಪಟ್ಟಿ

3) ತಹಶೀಲ್ದಾರರು /ಉಪತಹಶೀಲ್ದಾರರು ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ

4) ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳುನ್ನು ಲಗತ್ತಿಸಬೇಕು.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-01-2022

ಅರ್ಜಿ ಸಲ್ಲಿಸುವ ವೆಬ್‌ಸೈಟ್‌: https://anganwadirecruit.kar.nic.in

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.