ADVERTISEMENT

₹ 50,000 ವೇತನ: SBI ಬ್ಯಾಂಕಿನಲ್ಲಿ ಪದವೀಧರರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 6:16 IST
Last Updated 26 ಜೂನ್ 2020, 6:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ (ಎಸ್‌ಸಿಒ) ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಜುಲೈ 13 ಅರ್ಜಿ ಸಲ್ಲಿಸುವ ಕಡೆಯ ದಿನವಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಪ್ರತ್ಯೇಕವಾಗಿ ಸಲ್ಲಿಸಬೇಕು.

ಹುದ್ದೆಗಳ ಸಂಖ್ಯೆ: 444

ADVERTISEMENT

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ವೇತನ: ಮಾಸಿಕ ವೇತನಕ್ಕೆ ಸಂಬಂಧಿಸಿದ ಮಾಹಿತಿಗೆ ಈ ಕೆಳಗೆ ನೀಡಿರುವ ಎಸ್‌ಬಿಐ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದು.

ವಯಸ್ಸು: 21 ರಿಂದ 45 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ).

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ (ಕೆಲವು ಹುದ್ದೆಗಳಿಗೆ ಮಾತ್ರ) ಹಾಗೂ ಅಭ್ಯರ್ಥಿಗಳ ಸೇವಾ ಅನುಭವವನ್ನು ಪರಿಗಣಿಸಿ ಸಂದರ್ಶನಕ್ಕೆ ಕರೆಯಲಾಗುವುದು. ನೇಮಕಾತಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹750, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.

ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 13–7–2020

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡಿ: www.bank.sbi/careers or www.sbi.co.in/careers

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.