ADVERTISEMENT

ಕರ್ನಾಟಕ ಸರ್ಕಾರ: 2072 ಭೂಮಾಪಕರ ನೇಮಕಾತಿ ಅರ್ಜಿ– ITI, PUC, B.E ವಿದ್ಯಾರ್ಹತೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2019, 6:42 IST
Last Updated 26 ಡಿಸೆಂಬರ್ 2019, 6:42 IST
   

ಬೆಂಗಳೂರು: ರಾಜ್ಯದಲ್ಲಿ ಪೋಡಿ ಮುಕ್ತ ಅಭಿಯಾನ ಯೋಜನೆಯನ್ನು ಅನುಷ್ಠಾನಗೊಳಿಸಲು 2,072 ಭೂಮಾಪಕರನ್ನು ನೇಮಿಸಿಕೊಂಡು ಅವರಿಗೆ ಪರವಾನಗಿ ನೀಡಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ (www.landrecords.karnataka.gov.in/LSrecruitment) ಜನವರಿ 21ರೊಳಗೆ ಅರ್ಜಿ ಸಲ್ಲಿಸಬೇಕು. ಫೆಬ್ರುವರಿ ಅಥವಾ ಮಾರ್ಚ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಭೂಮಾಪಕ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

11–ಇ ನಕ್ಷೆ, ತತ್ಕಾಲ್‌ ಪೋಡಿ ಪ್ರಕರಣಗಳ ಅಳತೆ ಕಾರ್ಯ ನಿರ್ವಹಿಸಿ ನಕ್ಷೆಯನ್ನು ವಿಳಂಬವಿಲ್ಲದೆ ಒದಗಿಸುವ ಸಲುವಾಗಿ ಒಟ್ಟು 6,770 ಅರ್ಹ ಅಭ್ಯರ್ಥಿಗಳಿಗೆ ಭೂಮಾಪನ ಪರವಾನಗಿ ನೀಡಲು ಸರ್ಕಾರದ ಅನುಮೋದನೆ ದೊರೆತ ಮೇರೆಗೆ ಈ ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ 2072ಭೂಮಾಪನ ಪರವಾನಗಿ ನೀಡುವ ಅವಶ್ಯಕತೆ ಇರುವುದರಿಂದ ಅರ್ಜಿ ಆಹ್ವಾನಿಸಲಾಗಿದೆ.

ADVERTISEMENT

ವಿದ್ಯಾರ್ಹತೆ: ಪಿಯುಸಿ (ವಿಜ್ಞಾನ ನಿಕಾಯ)ಯಲ್ಲಿ ಗಣಿತದಲ್ಲಿ ಶೇ 60 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ ಬಿ.ಇ, ಅಥವಾ ಸರ್ವೇ ಟ್ರೇಡ್‌ನಲ್ಲಿ ಐಟಿಐ,ಡಿಪ್ಲೋಮಾ ಪಡೆದಿರಬೇಕು.

ಸೇವಾ ಶುಲ್ಕ: ಪರವಾನಗಿ ನೀಡಲಾದ ಭೂಮಾಪಕರಿಗೆ ಸರ್ಕಾರದ ನಿಯಮಗಳ ಅನುಸಾರ ಸೇವಾ ಶುಲ್ಕ ನೀಡಲಾಗುವುದು.

ವಯಸ್ಸು: ಕನಿಷ್ಠ 18, ಗರಿಷ್ಠ 65 ವರ್ಷಗಳು

ಅರ್ಜಿ ಶುಲ್ಕ:ಅಭ್ಯರ್ಥಿಗಳು ನಾಡ ಕಚೇರಿಗಳಲ್ಲಿನ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ತಮ್ಮ ಚುನಾವಣಾ ಗುರುತಿನ ಚೀಟಿ ಅಥವಾ ಆಧಾರ್‌ ನೀಡಿ ₹ 500 ಶುಲ್ಕ ಪಾವತಿಸಿ, ವಿಶಿಷ್ಟ ಅರ್ಜಿ ಸಂಖ್ಯೆ ಹೊಂದಿರುವ ಸ್ವೀಕೃತಿ ಪತ್ರ ಪಡೆಯಬೇಕು, ಈ ಸಂಖ್ಯೆ ಇಲ್ಲದಿದ್ದರೆ ಆನ್‌ಲೈನ್‌ ಅರ್ಜಿ ತೆರೆಯುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯ ವಿವರಗಳನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು.

ಅರ್ಜಿ ಸಲ್ಲಿಸುವ ಕಡೆ ದಿನಾಂಕ: 21–01–2020

ಅಧಿಸೂಚನೆ ಲಿಂಕ್‌:https://bit.ly/2Zp8wwN

ವೆಬ್‌ಸೈಟ್‌:www.landrecords.karnataka.gov.in/LSrecruitment

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.