ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 54 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು.
ಹುದ್ದೆಗಳ ಸಂಖ್ಯೆ: 54
ಹುದ್ದೆ ಹೆಸರು: ವೈಜ್ಞಾನಿಕ ಅಧಿಕಾರಿಗಳು (Scientific Officer)
ವಿದ್ಯಾರ್ಹತೆ: ವಿಜ್ಞಾನ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಹುದ್ದೆಗಳ ಅನುಸಾರದ ವಿದ್ಯಾರ್ಹತೆ ಮಾಹಿತಿಗೆಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್ ಕ್ಲಿಕ್ಕಿಸಿ ನೋಡಬಹುದು.
ವಯಸ್ಸು: ಕನಿಷ್ಠ 21 ವರ್ಷ, ಗರಿಷ್ಠ 35 ವರ್ಷಗಳು.
ವಯೋಮಿತಿ: ಸರ್ಕಾರಿ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ
*ಸಾಮಾನ್ಯ ಹಾಗೂಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ₹ 250
*ಪ.ಜಾ / ಪ.ಪಂಗಡ / ಪ್ರವರ್ಗ-1 ರ ಅಭ್ಯರ್ಥಿಗಳಿಗೆ: ₹ 100
ನೇಮಕಾತಿ ವಿಧಾನ, ವೇತನ ಶ್ರೇಣಿ ಸೇರಿದಂತೆ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆ ಲಿಂಕ್ ನೋಡಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಕಡೆ ದಿನ:18/03/2020
ಅಧಿಸೂಚನೆ ಲಿಂಕ್:http://rec19.ksp-online.in/
ವೆಬ್ಸೈಟ್:https://www.ksp.gov.in
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.