ADVERTISEMENT

UPSC | ಭಾರತೀಯ ಅರಣ್ಯ ಸೇವೆ: ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 9:34 IST
Last Updated 29 ಜನವರಿ 2022, 9:34 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಭಾರತೀಯ ಅರಣ್ಯ ಸೇವೆಗಳ (ಐಎಫ್‌ಎಸ್‌)ಮುಖ್ಯ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದೆ.

ಈ ಹಿಂದೆ ಪೂರ್ವಭಾವಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಅವರು ವೇಳಾಪಟ್ಟಿ ನೋಡಬಹುದು. ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ ಮೂಲಕ ಮಾಹಿತಿ ಪಡೆಯಬಹುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಮುಖ್ಯ ಪರೀಕ್ಷೆಯು 2022 ರ ಫೆಬ್ರುವರಿ 27 ರಿಂದ ಮಾರ್ಚ್‌ 06 ರವರೆಗೆ ನಡೆಯಲಿದೆ. ಒಟ್ಟು 7 ದಿನಗಳ ಕಾಲ ಪರೀಕ್ಷೆ ಜರುಗಲಿದೆ. ಮುಖ್ಯ ಪರೀಕ್ಷೆಯಲ್ಲಿ ಒಟ್ಟು 16 ವಿಷಯಗಳ 31 ಪ್ರಶ್ನೆ ಪತ್ರಿಕೆಗಳಿರುತ್ತವೆ.

ADVERTISEMENT

ಕೇಂದ್ರ ಆಡಳಿತಾತ್ಮಕ ಸೇವೆಯ (ಐಎಎಸ್., ಐಪಿಎಸ್‌, ಮತ್ತು ಐಎಫ್‌ಎಸ್‌) ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಆಯೋಗಮೂರು ಹಂತಗಳಲ್ಲಿ ಅಂದರೆ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸಲಿದೆ.

ವೆಬ್‌ಸೈಟ್‌: https://www.upsc.gov.in

ವೇಳಾಪಟ್ಟಿ ಇಂತಿದೆ...

ವೇಳಾಪಟ್ಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.