ADVERTISEMENT

KEA: ರಾಜ್ಯ ಬೀಜ ನಿಗಮದಲ್ಲಿ 32 ವಿವಿಧ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 9:02 IST
Last Updated 23 ಜೂನ್ 2022, 9:02 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ 32 ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿದೆ.

ಹುದ್ದೆಗಳ ಸಂಖ್ಯೆ: 32

ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ): 16
ಸಹಾಯಕರು: 16

ADVERTISEMENT

ವಿದ್ಯಾರ್ಹತೆ:ಸಹಾಯಕ ವ್ಯವಸ್ಥಾಪಕರು ಹುದ್ದೆಗೆ ಬಿಎಸ್ಸಿ ಇನ್‌ ಕೃಷಿ ಪದವಿ ಪಡೆದಿರಬೇಕು. ಸಹಾಯಕರು ಹುದ್ದೆಗಳಿಗೆಬಿಕಾಂ/ಬಿಬಿಎಂ, ಕೃಷಿಯಲ್ಲಿ 2 ವರ್ಷದ ಡಿಪ್ಲೊಮಾ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ಅರ್ಜಿ ಶುಲ್ಕ:ಸಾಮಾನ್ಯ ಅಭ್ಯರ್ಥಿಗಳಿಗೆ ₹ 750,OBC ಅಭ್ಯರ್ಥಿಗಳಿಗೆ ₹ 500, ಮಾಜಿ ಸೈನಿಕ,ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ, ಪ್ರಕ್ರಿಯೆ ಶುಲ್ಕ ₹ 250.

ವಯಸ್ಸು:ಯಾವುದೇ ಹುದ್ದೆಗೆ ಅರ್ಜಿ ಹಾಕಲು ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷಗಳು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ,ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸಿದವರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಮೆರಿಟ್ ಆಧಾರದಲ್ಲಿ ಆಯ್ಕೆ ನಡೆಸಲಾಗುತ್ತದೆ. ಪಠ್ಯಕ್ರಮ ಮತ್ತು ಪರೀಕ್ಷೆ ಮಾದರಿಯನ್ನು ಹುದ್ದೆವಾರು ವಿವರಗಳನ್ನು ನೇಮಕಾತಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‌ಸೈಟ್ ನೋಡುವುದು.

ಅರ್ಜಿ ಸಲ್ಲಿಕೆ ಕಡೆ ದಿನ :20-07-2022

ವೆಬ್‌ಸೈಟ್‌: https://cetonline.karnataka.gov.in/kea

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.