ADVERTISEMENT

ಭಾರತೀಯ ನೌಕಾಪಡೆ: ಸಹಾಯಕ ಕಮಾಂಡರ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 6:34 IST
Last Updated 30 ನವೆಂಬರ್ 2021, 6:34 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡರ್‌ ( ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 50 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಹುದ್ದೆಗಳ ಸಂಖ್ಯೆ: 300 ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ/ಪಿಯುಸಿ/ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ADVERTISEMENT

ವಯೋಮಿತಿ: ಹುದ್ದೆಗಳಿಗೆ ಅನುಸಾರ ಭಾರತೀಯ ನೌಕಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನಿಡಲಾಗುವುದು.

ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17–12–2021

ವೆಬ್‌ಸೈಟ್: www.joinindiannavy.gov.in.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.