ADVERTISEMENT

ITI ವಿದ್ಯಾರ್ಹತೆ: IOCLನಲ್ಲಿ 430 ಟ್ರೇಡ್‌ ಅಪ್ರೆಂಟಿಸ್‌ಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 10:19 IST
Last Updated 17 ಆಗಸ್ಟ್ 2021, 10:19 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ:ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ430ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನೇಮಕಾತಿಗೊಂಡ ಅಭ್ಯರ್ಥಿಗಳು ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ, ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಟ್ರೇಡ್‌ ಅಪ್ರೆಂಟಿಸ್ ಸಂಖ್ಯೆ: 430

ADVERTISEMENT

ಟ್ರೇಡ್‌ಗಳು: ಫಿಟ್ಟರ್‌, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್‌, ಇನ್‌ಸ್ಟ್ರೂಮೆಂಟ್ ಮೆಕಾನಿಕ್‌, ಮೆಕಾನಿಸ್ಟ್ ಟ್ರೇಡ್‌

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: ಸೆಪ್ಟೆಂಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24 ವರ್ಷ ವಯಸ್ಸಾಗಿರಬೇಕು.

ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ

ನೇಮಕಾತಿ: ಕೌಶಲ್ಯ ಅಥವಾ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಭರ್ತಿ ಮಾಡಿದ ಆನ್‌ಲೈನ್‌ ಅರ್ಜಿಯಲ್ಲಿ ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳನ್ನು ಅಪ್‌ಲೋಡ್‌ ಮಾಡಬೇಕು. ತರಬೇತಿ ಭ್ಯತೆ, ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನ https://www.iocl.com ವೆಬ್‌ಸೈಟ್‌ ನೋಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 28 ಸೆಪ್ಟೆಂಬರ್‌ 2021

ವೆಬ್‌ಸೈಟ್‌: https://www.iocl.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.