ADVERTISEMENT

8,575 ‘ಡಿ’ ಗ್ರೂಪ್ ಹುದ್ದೆಗಳಿಗೆ ಬಂದ ಅರ್ಜಿಗಳೆಷ್ಟು ಗೊತ್ತೇ?

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 5:53 IST
Last Updated 27 ಜುಲೈ 2020, 5:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ 8,575 ಗ್ರೂಪ್ ‘ಡಿ’ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಇದುವರೆಗೆ ಒಟ್ಟು 3,23,690 ಮಂದಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಸಿದ್ದಾರೆ.

ಗ್ರೂಪ್ ‘ಡಿ’ ಹುದ್ದೆಗಳ ಭರ್ತಿಯು ಕಠಿಣ ಸ್ಪರ್ಧೆಗೆ ಸಾಕ್ಷಿಯಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (ಜೆಕೆಎಸ್‌ಎಸ್‌ಬಿ) ಅಧಿಕಾರಿಗಳು ತಿಳಿಸಿದ್ದಾರೆ.

ಜೆಕೆಎಸ್‌ಎಸ್‌ಬಿ ಇತ್ತೀಚೆಗೆ ಜಿಲ್ಲಾ, ವಿಭಾಗೀಯ ಮತ್ತು ಕೇಂದ್ರ ಪ್ರಾಂತ್ಯದ ವಿವಿಧ ಇಲಾಖೆಗಳಲ್ಲಿನ ’ಡಿ’ ಗ್ರೂಪ್‌ ಹುದ್ದೆಗಳ ಭರ್ತಿಗೆ ಜಾಹೀರಾತು ನೀಡಿತ್ತು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಜುಲೈ 10ರಿಂದ ಅವಕಾಶ ಕಲ್ಪಿಸಿದೆ.

ADVERTISEMENT

‘ಭಾನುವಾರದ ವೇಳೆಗೆ 3,23,690 ಮಂದಿ ನೋಂದಣಿ ಮಾಡಿಕೊಂಡಿದ್ದು, 1,68,810 ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.