ADVERTISEMENT

CISF: ಸಹಾಯಕ ಕಮಾಂಡರ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2021, 6:00 IST
Last Updated 13 ಡಿಸೆಂಬರ್ 2021, 6:00 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡರ್‌ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 29 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಹುದ್ದೆಗಳು ಹೆಚ್ಚಾಗುವ ಸಂಭವ ಹೆಚ್ಚಿದೆ.

ಹುದ್ದೆಗಳ ಸಂಖ್ಯೆ: 29 ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ADVERTISEMENT

ವಯೋಮಿತಿ: ಹುದ್ದೆಗಳಿಗೆ ಅನುಸಾರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಕೇಂದ್ರ ಲೋಕಸೇವಾ ಆಯೋಗದ ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ನಂತರ ಅರ್ಜಿಯನ್ನು ಡೌನ್‌ಲೋಡ್‌ ಮಾಡಿಕೊಂಡು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಅಂಚೆ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21–12–2021

ವೆಬ್‌ಸೈಟ್: https://upsc.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.