ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗ
ಬ್ಯಾಂಕ್ ಆಫ್ ಬರೋಡ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್, ಇ ರಿಲೇಷನ್ಶಿಪ್ ಮ್ಯಾನೇಜರ್, ಗ್ರೂಪ್ ಹೆಡ್, ಡಿಜಿಟಲ್ ಸೇಲ್ಸ್ ಮ್ಯಾನೇಜರ್ ಸೇರಿದಂತೆ ಇತರ ಹುದ್ದೆಗಳು.
ಹುದ್ದೆಗಳ ಸಂಖ್ಯೆ: 511
ಸ್ಥಳ: ಭಾರತದೆಲ್ಲೆಡೆ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 45 ವರ್ಷ ಆಗಿರಬೇಕು.
ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಅಂಗವಿಕಲರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ₹ 100, ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹ 600
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ, ಗುಂಪು ಚರ್ಚೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 29, 2021
ಹೆಚ್ಚಿನ ಮಾಹಿತಿಗೆ: https://www.bankofbaroda.in/career-detail.htm#tab-18
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.