ADVERTISEMENT

ಎಸ್‌ಎಸ್‌ಎಲ್‌ಸಿ, ಪಿಯುಸಿ ಓದಿದವರಿಗೆ ಉದ್ಯೋಗಾವಕಾಶ: ಅರ್ಜಿ ಸಲ್ಲಿಸುವುದು ಹೇಗೆ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಅಕ್ಟೋಬರ್ 2025, 5:26 IST
Last Updated 3 ಅಕ್ಟೋಬರ್ 2025, 5:26 IST
   

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ಉತ್ತೀರ್ಣರಾದವರಿಗೆ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ಕಚೇರಿ ಸಹಾಯಕ ಹಾಗೂ ತಂತ್ರಜ್ಞ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 20ರೊಳಗೆ ಅನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಯಾವುವು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.


ಹುದ್ದೆಯ ವಿವರ: 

ADVERTISEMENT
  • ಸಂಸ್ಥೆಯ ಹೆಸರು: ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ 

  • ಒಟ್ಟು ಹುದ್ದೆಗಳು: 12

  • ಹುದ್ದೆಯ ಹೆಸರು: ಕಚೇರಿ ಸಹಾಯಕ ಹಾಗೂ ತಂತ್ರಜ್ಞ

  • ಉದ್ಯೋಗ ಸ್ಥಳ:  ಕಲಬುರಗಿ, ತಿರುಪತಿ , ಬೆಂಗಳೂರು, ಕ್ಯಾಲಿಕಟ್

  • ಸಂಬಳ: ತಿಂಗಳಿಗೆ ₹36,220 – ₹59,600 

    ಅರ್ಜಿ ಶುಲ್ಕ: 

  • ಅರ್ಜಿ ಸಲ್ಲಿಸುವವರು ಅರ್ಜಿ ಶುಲ್ಕ ₹885 ಪಾವತಿಸಬೇಕು.

  • ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

  • ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ. https://vismuseum.gov.in/VITM_recruitment/OaGrIII.php

  • ಅರ್ಜಿ ನಮೂನೆಯಲ್ಲಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.

  • ಬಳಿಕ ಅಗತ್ಯ ಪ್ರಮಾಣಪತ್ರಗಳು ಹಾಗೂ ದಾಖಲೆಗಳ ಪ್ರತಿಗಳನ್ನು ಸಲ್ಲಿಸಿ. 

  • ನಂತರ ಅರ್ಜಿ ಶುಲ್ಕವನ್ನು ಪಾವತಿಸಿ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.