ADVERTISEMENT

ಗ್ರೂಪ್‌ ‘ಬಿ’, ‘ಸಿ’ ‌ನೇಮಕಾತಿ: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 14:59 IST
Last Updated 10 ಸೆಪ್ಟೆಂಬರ್ 2024, 14:59 IST
<div class="paragraphs"><p>ಉದ್ಯೋಗ ಹುಡುಕಾಟ–ಸಾಂದರ್ಭಿಕ ಚಿತ್ರ</p></div>

ಉದ್ಯೋಗ ಹುಡುಕಾಟ–ಸಾಂದರ್ಭಿಕ ಚಿತ್ರ

   

ಬೆಂಗಳೂರು: ವಿವಿಧ ಇಲಾಖೆಗಳ ಗ್ರೂಪ್‌ ‘ಬಿ’ ಮತ್ತು ‘ಸಿ’ ಹುದ್ದೆಗಳ ನೇಮಕಾತಿಗೆ ಈಗಾಗಲೇ ಹೊರಡಿಸಿದ ಮತ್ತು ಮುಂದಿನ ಒಂದು ವರ್ಷದ ಒಳಗೆ ಹೊರಡಿಸಲಾಗುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯಿಸುವಂತೆ ಗರಿಷ್ಠ ವಯೋಮಿತಿಯನ್ನು 3 ವರ್ಷ ಸಡಿಲಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

‘ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಗ್ರೂಪ್‌ ‘ಬಿ’, ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗಳನ್ನು ಕೋವಿಡ್‌ ಮತ್ತು ಇತರ ಕೆಲವು ಕಾರಣಗಳಿಗೆ ರಾಜ್ಯ ಸರ್ಕಾರ ಮುಂದೂಡುತ್ತಲೇ ಬಂದಿದೆ. ಇದರಿಂದ ಅಭ್ಯರ್ಥಿಗಳ ವಯೋಮಿತಿ ಹೆಚ್ಚಿದ್ದು, ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶದಿಂದ ವಂಚಿತರಾಗುತ್ತಿದ್ದೇವೆ. ಹೀಗಾಗಿ, ನೇರ ನೇಮಕಾತಿಗೆ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು.

ADVERTISEMENT

ವಯೋಮಿತಿ ಹೆಚ್ಚಿಸಬೇಕೆಂಬ ಅಭ್ಯರ್ಥಿಗಳ ಮನವಿ ಕುರಿತು ಸೆ. 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಸಡಿಲಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.