ಉತ್ತರ ಕೇಂದ್ರ ರೈಲ್ವೆ: 1659 ಅಪ್ರೆಂಟಿಸ್ ಹುದ್ದೆಗಳು
ರೈಲ್ವೆ ಇಲಾಖೆಯ ಉತ್ತರ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ 1659 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಪ್ಲಂಬರ್, ಪೇಂಟರ್ ಹುದ್ದೆಗಳ ನೇಮಕಾತಿ ನಡೆಯಲಿದೆ
ಒಟ್ಟು ಹುದ್ದೆಗಳ ಸಂಖ್ಯೆ: 1659
ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.
ವಯೋಮಿತಿ ಸಡಿಲಿಕೆ:ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹100. ಎಸ್ಸಿ / ಎಸ್ಟಿ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ನೇಮಕಾತಿ ವಿಧಾನ:ಎಸ್ಎಸ್ಎಲ್ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್www.rrcpryj.orgಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನ: 01-08-2022
ಅಧಿಸೂಚನೆ:https://www.rrcpryj.org/Downloads/Notification-Act-Apprentices-01-2022.pdf
ವೆಬ್ಸೈಟ್:www.rrcpryj.org
------
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.