ADVERTISEMENT

ವೇತನ ₹ 32,200: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ನರ್ಸ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 7:05 IST
Last Updated 30 ಜನವರಿ 2020, 7:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಾದ ಬೀದರ್‌, ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲ್ಬುರ್ಗಿ ಮತ್ತು ರಾಯಚೂರು ಜಿಲ್ಲಾ ಆಸ್ಪತ್ರೆಗಳು ಸೇರಿದಂತೆ ಹೆಲ್ತ್‌ ಸೆಂಟರ್‌ಗಳಲ್ಲಿ ಖಾಲಿ ಇರುವ 253 ನರ್ಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳ ಸಂಖ್ಯೆ: 253

ADVERTISEMENT

ವಿದ್ಯಾರ್ಹತೆ:ಮ್ಯಾನತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್‌.ಸಿ ನರ್ಸಿಂಗ್‌, ಪೋಸ್ಟ್‌ ಬಿಎಸ್‌.ಸಿ ನರ್ಸಿಂಗ್ ಪದವಿ ಪೂರೈಸಿರಬೇಕು. ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಕೊಂಡಿರಬೇಕು.

ವೇತನ: ಮಾಸಿಕ ₹ 24,200 ಹಾಗೂ ಹೆಚ್ಚುವರಿಯಾಗಿ ₹8,000 ಸೇವಾ ಪ್ರೋತ್ಸಾಹ ಭತ್ಯೆ ಕೂಡ ನೀಡಲಾಗುತ್ತದೆ.

ವಯಸ್ಸು:ಕನಿಷ್ಠ–18, ಗರಿಷ್ಠ –35 ವರ್ಷ (ಮೀಸಲಾತಿ ಅನ್ವಯ ಸಡಿಲಿಕೆ ಇರುತ್ತದೆ).

ವಯೋಮಿತಿ:ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ:ಕಂಪ್ಯೂಟರ್‌ ಆಧಾರಿತ ಆನ್‌ಲೈನ್ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಯಲ್ಲಿ ಮೆರಿಟ್‌ ಪಡೆದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.

ನೇಮಕಾತಿ ಸ್ಥಳಗಳು: ಬಳ್ಳಾರಿ, ಕೊಪ್ಪಳ, ಬೀದರ್‌, ರಾಯಚೂರು,ಕಲ್ಬುರ್ಗಿ, ಯಾದಗಿರಿ

ಅರ್ಜಿ ಸಲ್ಲಿಸಲು ಕೊನೆಯ ದಿನ: 07 ಫೆಬ್ರುವರಿ 2020

ಅಧಿಸೂಚನೆ ಲಿಂಕ್‌:https://bit.ly/3aO8LXH

ಅರ್ಜಿ ಸಲ್ಲಿಸುವ ವೆಬ್‌ಸೈಟ್‌:http://techkshetra.info

ಸರ್ಕಾರದ ವೆಬ್‌ಸೈಟ್‌:https://www.karnataka.gov.in/hfw/pages/home.aspx

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.