ADVERTISEMENT

ಕರ್ನಾಟಕ ಸರ್ಕಾರ | ಖಾದಿ ಮಂಡಳಿಯಲ್ಲಿ FDA ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 7:22 IST
Last Updated 22 ನವೆಂಬರ್ 2021, 7:22 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ರಾಜ್ಯದ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಎಫ್‌ಡಿಎ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಉ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ನವೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ವಿವರ

ADVERTISEMENT

1) ಎಫ್‌ಡಿಎ –09
2) ಗ್ರಾಮೋದ್ಯೋಗ ಅಧಿಕಾರಿ –02
3) ತಾಂತ್ರಿಕ ಮೇಲ್ವಿಚಾರಕರು –05
4) ತಾಂತ್ರಿಕ ಸಹಾಯಕರು –13

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸು: ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ತುಂಬುರಬೇಕು. ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಇದೆ.

ವಯೋಮಿತಿ: 2ಎ, 2ಬಿ, ಹಾಗೂ 3ಎ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ(ಲಿಖಿತ) ಮೂಲಕ ಆಯ್ಕೆ ನಡೆಯಲಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30–11–2021

ವೆಬ್‌ಸೈಟ್:https://khadi.karnataka.gov.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.