ADVERTISEMENT

ಕರ್ನಾಟಕ ಸರ್ಕಾರ | PUC ಪಾಸಾದವರಿಂದ ಪೊಲೀಸ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 5:47 IST
Last Updated 6 ಜೂನ್ 2021, 5:47 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಕರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 3,533

ಹುದ್ದೆ: ಪೊಲೀಸ್ ಕಾನ್‌ಸ್ಟೇಬಲ್‌

ADVERTISEMENT

ಸ್ಥಳ: ಕರ್ನಾಟಕದೆಲ್ಲೆಡೆ

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಜೂನ್‌ 26, 2021ಕ್ಕೆ ಅನ್ವಯವಾಗುವಂತೆ ಪಿಯುಸಿ ಅಥವಾ ತತ್ಸಮಾನ ಶಿಕ್ಷಣ ಮುಗಿಸಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 27, ಇತರ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ. ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ ಗರಿಷ್ಠ 30 ಮೀರಿರಬಾರದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹ 400 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಗೆ ₹ 200.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 26, 2021ಹೆಚ್ಚಿನ ಮಾಹಿಗೆ: https://recruitment.ksp.gov.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.