ADVERTISEMENT

ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಸಲು ಮೇ 4 ಕಡೇ ದಿನ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2024, 23:35 IST
Last Updated 5 ಏಪ್ರಿಲ್ 2024, 23:35 IST
   

ಬೆಂಗಳೂರು: ಕಂದಾಯ ಇಲಾಖೆಯ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏ.5ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ.

ಹುದ್ದೆಗಳ ನೇಮಕಾತಿಗೆ ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಿದಾಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸಲು  ಏ.3ರವರೆಗೆ ಅವಕಾಶ ನೀಡಿತ್ತು. ಆದರೆ, ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿನ ತಾಂತ್ರಿಕ ದೋಷಗಳ ಕಾರಣ ಈಗ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 7ರವರೆಗೆ ಅವಕಾಶ ನೀಡಲಾಗಿದೆ. 

ಕೆ-ಸೆಟ್‌ ಕೀ ಉತ್ತರ ಪ್ರಕಟ: 

ADVERTISEMENT

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಜ. 13ರಂದು 42 ವಿವಿಧ ವಿಷಯಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.