ADVERTISEMENT

KPSC: 137 ಎಫ್‌ಡಿಎ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2022, 6:45 IST
Last Updated 27 ಮಾರ್ಚ್ 2022, 6:45 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕರ್ನಾಟಕ ಲೋಕಸೇವಾ ಆಯೋಗವು (kpsc) ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ 137 ಎಫ್‌ಡಿಎ ಹುದ್ದೆಗಳ ನೇಮಕಾತಿಯಅಂತಿಮ ಆಯ್ಕೆಪಟ್ಟಿ ಹಾಗೂ ಕಟ್‌ ಆಫ್‌ ಅಂಕಗಳನ್ನು ಬಿಡುಗಡೆ ಮಾಡಿದೆ.

ಸದರಿ ಹುದ್ದೆಗಳಿಗೆ 2019ರಲ್ಲಿ ಅಧಿಸೂಚನೆ ಹೊರಡಿಸಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಈ ಹಿಂದೆ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಇವುಹೈದರಾಬಾದ್‌ ಕರ್ನಾಟಕ (ಕಲ್ಯಾಣ ಕರ್ನಾಟಕ ವೃಂದದ) ಭಾಗದ ಮೀಸಲಾತಿ ಹುದ್ದೆಗಳು.

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು, ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ನೋಡಬಹುದು.

ADVERTISEMENT

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌:http://kpsc.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.