ADVERTISEMENT

ಗೆಜೆಟೆಡ್‌ ಪ್ರೊಬೇಷನರಿ: ಪೂರ್ವಭಾವಿ ಪರೀಕ್ಷೆ ಜುಲೈ 7ರಂದು

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 0:10 IST
Last Updated 3 ಏಪ್ರಿಲ್ 2024, 0:10 IST
   

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಏಪ್ರಿಲ್‌ 15ರವರೆಗೆ ಕೆಪಿಎಸ್‌ಸಿ ವಿಸ್ತರಿಸಿದೆ. ಪೂರ್ವಭಾವಿ ಪರೀಕ್ಷೆ ಜುಲೈ 7ರಂದು ನಡೆಯಲಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಏಪ್ರಿಲ್‌ 3 ಕೊನೆಯ ದಿನಾಂಕ, ಪೂರ್ವಭಾವಿ ಪರೀಕ್ಷೆಯನ್ನು ಮೇ 5ರಂದು ನಡೆಸಲು ತಾತ್ಕಾಲಿಕವಾಗಿ ಕೆಪಿಎಸ್‌ಸಿ ನಿರ್ಧರಿಸಿತ್ತು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಿನಾಂಕ ಮುಂದೂಡಲಾಗಿದೆ.

‘ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ನಡೆಯುವ ಮುಖ್ಯ ಪರೀಕ್ಷೆಯು ಕಡ್ಡಾಯ ಕನ್ನಡ ಮತ್ತು ಕಡ್ಡಾಯ ಇಂಗ್ಲಿಷ್‌ ಎಂಬ ಎರಡು ಅರ್ಹತಾ ಪರೀಕ್ಷೆಗಳನ್ನು ಒಳಗೊಂಡಿದೆ. ಆಯೋಗ ಈ ಹಿಂದೆ ನಡೆಸಿದ್ದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಉತ್ತೀರ್ಣರಾಗಿದ್ದರೂ, 2023–24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಮುಖ್ಯ ಪರೀಕ್ಷೆಗೆ ಅರ್ಹರಾಗುವ ಎಲ್ಲ ಅಭ್ಯರ್ಥಿಗಳು ಎರಡೂ ಅರ್ಹತಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಬರೆಯಬೇಕು’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಾಕೇಶ್‌ ಕುಮಾರ್‌ ತಿಳಿಸಿದ್ದಾರೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.