ADVERTISEMENT

KPSC: 43 ಅಸಿಸ್ಟಂಟ್ ಕಂಟ್ರೋಲರ್, 54 ಅಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರೂಪ್ ಎ, ಗ್ರೂಪ್ ಬಿ ಹುದ್ದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮಾರ್ಚ್ 2024, 15:50 IST
Last Updated 2 ಮಾರ್ಚ್ 2024, 15:50 IST
ಅರ್ಜಿ ಆಹ್ವಾನ (ಸಾಂದರ್ಭಿಕ ಚಿತ್ರ)
ಅರ್ಜಿ ಆಹ್ವಾನ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರೂಪ್ ಎ, ಗ್ರೂಪ್ ಬಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಗ್ರೂಪ್ ಎ ಸಹಾಯಕ ನಿಯಂತ್ರಕರು (ಅಸಿಸ್ಟಂಟ್ ಕಂಟ್ರೋಲರ್) 43 ಹುದ್ದೆಗಳು ಹಾಗೂ ಗ್ರೂಪ್ ಬಿ ವಿಭಾಗದ ಲೆಕ್ಕ ಪರಿಶೋಧನಾಧಿಕಾರಿ ಎಂಬ 54 ಹುದ್ದೆಗಳ (ಅಡಿಟ್ ಆಫೀಸರ್) ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ.

ಇದೇ ಮಾರ್ಚ್ 18 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು ಏಪ್ರಿಲ್ 17ರಂದು ಮುಕ್ತಾಯವಾಗಲಿದೆ.

ADVERTISEMENT

ಅರ್ಜಿ ಸಲ್ಲಿಸುವ ಶುಲ್ಕ ಸಾಮಾನ್ಯ ವರ್ಗದವರಿಗೆ ₹600, ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50 ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ–1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಎಂ.ಕಾಂ, ಎಂಬಿಎ (ಆರ್ಥಿಕ, ಆರ್ಥಿಕ ನಿರ್ವಹಣೆ) ಪದವೀಧರರು ಅರ್ಜಿ ಸಲ್ಲಿಸಲು ಅರ್ಹ.

ಕನಿಷ್ಠ 21 ವರ್ಷ ವಯಸ್ಸು ಮೀರಿದವರು ಅರ್ಜಿ ಸಲ್ಲಿಸಲು ಅರ್ಹ. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 35, ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ 38 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ–1 ಅಭ್ಯರ್ಥಿಗಳಿಗೆ 41 ವರ್ಷ.

ಪೂರ್ವಭಾವಿ ಪರೀಕ್ಷೆ (ಬಹುಆಯ್ಕೆ ಮಾದರಿಯ ಪ್ರಶ್ನೆಗಳ ಎರಡು ಪತ್ರಿಕೆ), ಮುಖ್ಯ ಪರೀಕ್ಷೆ (ವಿವರಣಾತ್ಮಕ) ಎಂಬ ಎರಡು ಹಂತಗಳಲ್ಲಿ ಈ ನೇಮಕಾತಿ ನಡೆಯಲಿದೆ. ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ ಇರುವುದಿಲ್ಲ).

ವಿವರವಾದ ಅಧಿಸೂಚನೆಗೆ kpsc.kar.nic.in ಭೇಟಿ ನೀಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.