ADVERTISEMENT

KPSC: 1010 FDA ಹುದ್ದೆಗಳ ಆಯ್ಕೆಪಟ್ಟಿ, ಕಟ್‌ಆಫ್ ಅಂಕಗಳು ಪ್ರಕಟ

Published 20 ಮಾರ್ಚ್ 2022, 7:58 IST
Last Updated 20 ಮಾರ್ಚ್ 2022, 7:58 IST
ಉದ್ಯೋಗ ಸೌಧ
ಉದ್ಯೋಗ ಸೌಧ   

ಕರ್ನಾಟಕ ಲೋಕಸೇವಾ ಆಯೋಗವು (kpsc) 1010 ಎಫ್‌ಡಿಎ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಹಾಗೂ ಕಟ್‌ಆಫ್ ಅಂಕಗಳನ್ನು ಬಿಡುಗಡೆ ಮಾಡಿದೆ.

ಸದರಿ ಹುದ್ದೆಗಳಿಗೆ 2021ರಲ್ಲಿ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ನಡೆಸಿತ್ತು. ಈ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು ಅಭ್ಯರ್ಥಿಗಳು ಚೆಕ್‌ ಮಾಡಿಕೊಳ್ಳಬಹುದು.

ಒಟ್ಟು 1010 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು, ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ನೋಡಬಹುದು.

ADVERTISEMENT

ಅಭ್ಯರ್ಥಿಗಳು ತಮ್ಮ ಹೆಸರು, ರಿಜಿಸ್ಟರ್‌ ಸಂಖ್ಯೆಯ ಮೂಲಕ ಚೆಕ್‌ ಮಾಡಿಕೊಳ್ಳಬಹುದು.

ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ದಿನಾಂಕ 24-03-2022 ರೊಳಗೆ ಅಗತ್ಯ ಮಾಹಿತಿಗಳೊಂದಿಗೆ ಸಲ್ಲಿಸಲು ಸೂಚಿಸಲಾಗಿದೆ.

ವಿಳಾಸ : ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01.

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: http://kpsc.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.