ADVERTISEMENT

ಕೆಸೆಟ್- 2024: ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮತ್ತೆ ವಿಸ್ತರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಆಗಸ್ಟ್ 2024, 14:07 IST
Last Updated 30 ಆಗಸ್ಟ್ 2024, 14:07 IST
<div class="paragraphs"><p>ಪರೀಕ್ಷೆ</p></div>

ಪರೀಕ್ಷೆ

   

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತಿರುವ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್- 2024) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಸೆಪ್ಟೆಂಬರ್‌ 2ರವರೆಗೆ ವಿಸ್ತರಿಸಲಾಗಿದೆ.

ಈ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಎರಡನೇ ಬಾರಿಗೆ ಮುಂದೂಡಿದಂತಾಗಿದೆ. ಈ ಮೊದಲು ಆಗಸ್ಟ್ 28ರವರೆಗೆ ಅವಕಾಶ ನೀಡಲಾಗಿತ್ತು.

ADVERTISEMENT

ಈಗ ನೀಡಿರುವ ಕೊನೆ ಅವಕಾಶವನ್ನು ಮತ್ತೆ ನೀಡಲಾಗುವುದಿಲ್ಲ. ಇದು ಕೊನೆ ಬಾರಿ ಎಂದು ಕೆಇಎ ಹೇಳಿದೆ.

‘ಅರ್ಜಿ ಸಲ್ಲಿಸಲು ಆಗಸ್ಟ್‌ 28 ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಸೆಪ್ಟೆಂಬರ್ 3ರವರೆಗೆ  ಅವಕಾಶ ನೀಡಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.