ADVERTISEMENT

PUC ವಿದ್ಯಾರ್ಹತೆ, ₹ 89,100 ವೇತನ: ಸೇನೆಯಲ್ಲಿ ನಾವಿಕ, ಸೈನಿಕರಾಗುವವರಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 12:17 IST
Last Updated 13 ಜನವರಿ 2020, 12:17 IST
   

ನವದೆಹಲಿ: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನ್ಯಾಷನಲ್ ನೇವೆಲ್‌ ಅಕಾಡೆಮಿ ಪರೀಕ್ಷೆಗಾಗಿ ಕೇಂದ್ರ ಲೋಕಸೇವಾ ಆಯೋಗವು ಅರ್ಜಿ ಆಹ್ವಾನಿಸಿದೆ. ಒಟ್ಟು418 ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗುವುದು. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನೇಮಕಾತಿ ಪರೀಕ್ಷೆಯನ್ನು ಎಲ್ಲಾ ರಾಜ್ಯಗಳ ಆಯಾ ರಾಜಧಾನಿಯಲ್ಲಿ ನಡೆಸಲಾಗುವುದು. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ಕೇಂದ್ರವಿದೆ. ಕೇಂದ್ರ ಲೋಕಸೇವಾ ಆಯೋಗ ಈ ಪರೀಕ್ಷೆ ನಡೆಸಲಿದ್ದು ಅವಿವಾಹಿತರು ಮಾತ್ರ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ನೋಡುವುದು.

ಹುದ್ದೆಗಳ ಸಂಖ್ಯೆ: 418

ADVERTISEMENT

ವಿದ್ಯಾರ್ಹತೆ

1) ನ್ಯಾಷನಲ್ ನೇವೆಲ್‌ ಅಕಾಡೆಮಿ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಗಣಿತ ಮತ್ತು ಭೌತವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ಓದಿರಬೇಕು.

2) ನ್ಯಾಷನಲ್ ಡಿಫೆನ್ಸ್ ಅಕಾಡೆಮಿ:ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವೇತನ ಶ್ರೇಣಿ:ತರಬೇತಿ ಸಮಯದಲ್ಲಿ ₹59,600 ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹89,000ಆರಂಭಿಕ ವೇತನ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ: 2001 ಜುಲೈ 2ರಿಂದ 2004 ಜುಲೈ 1ರೊಳಗೆ ಜನಿಸಿದವರಾಗಿರಬೇಕು.

ನೇಮಕಾತಿ ಪ್ರಕ್ರಿಯೆ: ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯಲ್ಲಿ ಪರೀಕ್ಷೆಯನ್ನು ಬರೆಯಬೇಕು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳಿಗೆ ₹100.

ಅರ್ಜಿ ಸಲ್ಲಿಸಲು ಕೊನೆಯ ದಿನ: 28 ಜನವರಿ 2020

ಅಧಿಸೂಚನೆ ಲಿಂಕ್‌:https://bit.ly/2QQk6OV

ವೆಬ್‌ಸೈಟ್‌ ಲಿಂಕ್‌: https://bit.ly/37YbCen

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.