ಬೆಂಗಳೂರು:ರಾಜ್ಯದ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿಖಾಲಿ ಇರುವ 552 ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಈ ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳ ಸಂಖ್ಯೆ: 552
ವಿದ್ಯಾರ್ಹತೆ: ಮ್ಯಾನತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್.ಸಿ ನರ್ಸಿಂಗ್, ಪೋಸ್ಟ್ ಬಿಎಸ್.ಸಿ ನರ್ಸಿಂಗ್ ಪದವಿ ಪೂರೈಸಿರಬೇಕು. ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಣಿ ಮಾಡಿಕೊಂಡಿರಬೇಕು.
ವೇತನ: ಮಾಸಿಕ ₹ 24,200 (ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ₹22,000) ಹೆಚ್ಚುವರಿಯಾಗಿ ₹8,000 ಸೇವಾ ಪ್ರೋತ್ಸಾಹ ಭತ್ಯೆ ಕೂಡ ನೀಡಲಾಗುತ್ತದೆ.
ವಯಸ್ಸು: ಕನಿಷ್ಠ–18, ಗರಿಷ್ಠ –35 ವರ್ಷ (ಮೀಸಲಾತಿ ಅನ್ವಯ ಸಡಿಲಿಕೆ ಇರುತ್ತದೆ).
ವಯೋಮಿತಿ:ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಮಗವಿಕಲರಿಗೆ 10 ವರ್ಷಗಳು.
ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಯಲ್ಲಿ ಮೆರಿಟ್ ಪಡೆದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.
ನೇಮಕಾತಿ ಸ್ಥಳಗಳು: ಮೈಸೂರು, ಕೋಲಾರ, ಬಳ್ಳಾರಿ, ಕೊಪ್ಪಳ, ಬೀದರ್, ರಾಯಚೂರು, ಬಾಗಲಕೋಟೆ
ಅರ್ಜಿ ಸಲ್ಲಿಸಲು ಕೊನೆಯ ದಿನ: 12 ಡಿಸೆಂಬರ್ 2019.
ಅಧಿಸೂಚನೆ ಲಿಂಕ್: https://bit.ly/34ws44d
ಸರ್ಕಾರದ ವೆಬ್ಸೈಟ್:https://www.karnataka.gov.in/hfw/Pages/home.aspx
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.