ADVERTISEMENT

247 ಪಿಡಿಒ ಹುದ್ದೆ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2024, 16:31 IST
Last Updated 15 ಮಾರ್ಚ್ 2024, 16:31 IST
   

ಬೆಂಗಳೂರು: ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) 247 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

150 ಹುದ್ದೆಗಳು ಉಳಿಕೆ ಮೂಲ ವೃಂದಕ್ಕೆ ಸೇರಿದ್ದರೆ, 97 ಹುದ್ದೆಗಳು ಹೈದ್ರಾಬಾದ್‌–ಕರ್ನಾಟಕ ವೃಂದಕ್ಕೆ ಸೇರಿವೆ. ಏಪ್ರಿಲ್‌ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮೇ 15ಕ್ಕೆ ಮುಕ್ತಾಯವಾಗಲಿದೆ ಎಂದು ಆಯೋಗವು ಅಧಿಸೂಚನೆಯಲ್ಲಿ ತಿಳಿಸಿದೆ.

ಪದವಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗಕ್ಕೆ ಕನಿಷ್ಠ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಗಳ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾರಿ, ಪರಿಶಿಷ್ಟ ಪಂಗಡಗಳು ಮತ್ತು ಪ್ರವರ್ಗ–1ರ ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸನ್ನು ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ADVERTISEMENT

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹ 600, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹ 300, ಮಾಜಿ ಸೈನಿಕರಿಗೆ ₹ 50 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.