ಬೆಂಗಳೂರು: ಉತ್ತರ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು.
ಹುದ್ದೆಗಳ ಸಂಖ್ಯೆ: 17
ಮೀಸಲಾತಿ: ಸಾಮಾನ್ಯ ವರ್ಗ–06, ಪ.ಜಾತಿ–03, ಪ.ಪಂಗಡ–01, ಹಿಂದುಳಿದ ವರ್ಗ (ಒಬಿಸಿ)–07
ವಿದ್ಯಾರ್ಹತೆ:ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕನ್ನಡ, ಆಂಗ್ಲ ಬೆರಳಚ್ಚು ಹಾಗೂ ಶೀಘ್ರ ಲಿಪಿ ಕೋರ್ಸ್ ಅನ್ನು ಪ್ರೌಢ ದರ್ಜೆಯಲ್ಲಿ ಪಾಸಾಗಿರಬೇಕು
ವೇತನ ಶ್ರೇಣಿ: ₹ 27,650(ಮೂಲ ವೇತನ)ರಿಂದ ₹52,650
ನಿಗದಿತ ಶುಲ್ಕ:ಸಾಮಾನ್ಯ, ಪ್ರವರ್ಗ- 1,2ಎ, 2ಬಿ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳು ₹200 ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ₹ 100 ಮಾತ್ರ.
ವಯೋಮಿತಿ ಸಡಿಲಿಕೆ:ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.
ಅರ್ಜಿ ಸಲ್ಲಿಸುವ ವಿಧಾನ:ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಈ ಅಧಿಸೂಚನೆ ಲಿಂಕ್ ನೋಡಿ.
ಅರ್ಜಿ ಸಲ್ಲಿಸುವ ಕೊನೆಯ ದಿನ: 18-03-2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.