ADVERTISEMENT

NWKRTC: ಶೀಘ್ರದಲ್ಲಿ 2500 ಚಾಲಕ, ನಿರ್ವಾಹಕ ಹುದ್ದೆಗಳ ನೇಮಕ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2020, 9:30 IST
Last Updated 1 ಮಾರ್ಚ್ 2020, 9:30 IST
   

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ಚಾಲಕ, ನಿರ್ವಾಹಕ ಹುದ್ದೆಗಳ ನೇಮಕಕ್ಕೆ ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ಶೀಘ್ರದಲ್ಲೇ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಸಂಸ್ಥೆಯ 23ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾಯವ್ಯ ಸಾರಿಗೆ ಸಂಸ್ಥೆಗೆ ಮುಂದಿನ ಐದು ವರ್ಷ ವಾಹನ ತೆರಿಗೆ ವಿನಾಯ್ತಿ ನೀಡುವಂತೆ ಹಾಗೂ ವಿದ್ಯಾರ್ಥಿ ಬಸ್ ಪಾಸ್ ಗೆ ಸಂಬಂಧಿಸಿದಂತೆ ಸರ್ಕಾರದಿಂದ ಬರಬೇಕಿರುವ ₹ 722 ಕೋಟಿ ಹಣವನ್ನು ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಬಸ್ ಚಾಲಕರು, ನಿರ್ವಾಹಕರು ಹಾಗು ಸಂಸ್ಥೆಯ ಸಿಬ್ಬಂದಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ, ಸಂಸ್ಥೆಯ ಬಲವರ್ಧನೆಗೆ ಶ್ರಮಿಸಬೇಕು ಎಂದರು. ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಎಂ.ಡಿ.ರಾಜೇಂದ್ರ ಚೋಳನ್ ಇದ್ದರು. ಅಪಘಾತ ರಹಿತ ಬಸ್ ಚಾಲನೆ ಮಾಡಿದ ಚಾಲಕರಿಗೆ ಬೆಳ್ಳಿ ಪದಕ, ಅಂತರ್ ವಿಭಾಗೀಯ ಕ್ರೀಡಾ ಮತ್ತು ಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.