ADVERTISEMENT

NWKRTC JOBS: ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಹತೆಗಳೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಅಕ್ಟೋಬರ್ 2025, 5:30 IST
Last Updated 14 ಅಕ್ಟೋಬರ್ 2025, 5:30 IST
   

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್‌ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಹಾಗಿದ್ದರೆ, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ತಿಳಿಯೋಣ.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಎಸ್‌ಎಸ್ಎಲ್‌ಸಿ, ಪಿಯುಸಿ, ಪದವಿ, ಬಿಕಾಂ, ಬಿಇ ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು. 

ADVERTISEMENT

ವಯೋಮಿತಿ:

  • ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದು.

  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ. 

  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ. 

ಅರ್ಜಿ ಶುಲ್ಕ: 

  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹750.

  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹500.

  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ₹250.

ಅರ್ಜಿ ಸಲ್ಲಿಸುವುದು ಹೇಗೆ?

  • ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್‌ ಮಾಡಿ. https://cetonline.karnataka.gov.in/kea/indexnew

  • ಅಲ್ಲಿ ನೀಡಲಾದ ’NWKRTC’ ಅರ್ಜಿ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

  • ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.

  • ಪ್ರಮಾಣ ಪತ್ರಗಳು ಹಾಗೂ ಅಗತ್ಯ ದಾಖಲೆಗಳನ್ನು ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.

  • ಅರ್ಜಿ ಶುಲ್ಕವನ್ನು ಪಾವತಿಸಿ, ಅರ್ಜಿ ಸಲ್ಲಿಸಿ.

  • ಅರ್ಜಿ ಸಂಖ್ಯೆಯನ್ನು ನೆನಪಿಟ್ಟುಕೊಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.